ಮಕ್ಕಳ ಹಕ್ಕು ರಕ್ಷಿಸಲು ಸಮನ್ವಯ ಸೇವೆ ಅಗತ್ಯದಿನೇದಿನೇ ಮಕ್ಕಳ ವಿರುದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ಜಿಲ್ಲೆಯಲ್ಲಿ ಕಳೆದ ಏಪ್ರಿಲ್ನಿಂದ ಡಿಸೆಂಬರ್ವರೆಗೆ ಒಟ್ಟು 102 ಬಾಲ್ಯವಿವಾಹ ಪ್ರಕರಣ, 156 ಪೋಕ್ಸೋ, 247 ಹದಿಹರೆಯದವರ ಗರ್ಭಧಾರಣೆ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಜೆಜೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ, ಆರ್ಟಿಇ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆ, ಕಾನೂನುಗಳಿವೆ. ಆದರೂ, ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಹಾಗಾದರೆ, ಕಾಯ್ದೆ ಕಾನೂನು ಸಮರ್ಪಕ ಅನುಷ್ಠಾನ ಆಗುತ್ತಿಲ್ಲವಾ? ಪಾಲನೆಯಾಗುತ್ತಿಲ್ಲವಾ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ. ಕೊಳ್ಳ ಶಿವಮೊಗ್ಗದಲ್ಲಿ ಹೇಳಿದ್ದಾರೆ.