ಧರ್ಮಸ್ಥಳ ದೇವಾಲಯವನ್ನು ಪ್ರಾಣಕೊಟ್ಟಾದರೂ ಉಳಿಸಿಕೊಳ್ಳುತ್ತೇವೆ ಹಿಂದೂಗಳ ಪುಣ್ಯಕ್ಷೇತ್ರವಾದ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ, ವೀರೇಂದ್ರ ಹೆಗ್ಗಡೆ ಅವರಿಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದ್ದು, ಅದರ ವಿರುದ್ಧ ರಾಷ್ಟ್ರಭಕ್ತರ ಬಳಗದಿಂದ ಧರ್ಮಸ್ಥಳಕ್ಕೆ ಶಿವಮೊಗ್ಗದಿಂದ ಧರ್ಮರಕ್ಷಾ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.