ಬಿಎಸ್‌ವೈ ಅವರಂತೆ ನಡೆಯಲು ಪ್ರಯತ್ನಿಸುವೆಒಬ್ಬ ಜನಪ್ರತಿನಿಧಿ ಯಶಸ್ವಿ ಆಗಬೇಕು ಎಂದರೆ ರಸ್ತೆ, ಕಟ್ಟಡ ನಿರ್ಮಾಣ ಮಾಡಿದರೆ ಸಾಲದು, ಇಡೀ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಆಗಬೇಕು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಆದಾಗ ಮಾತ್ರ ಒಬ್ಬ ಯಶಸ್ವಿ ಜನಪ್ರತಿನಿಧಿ ಎನ್ನಿಸಿಕೊಳ್ಳಲು ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.