ಸುಳ್ಳು ಸುದ್ದಿ ನಂಬಿ ಇ-ಕೆವೈಸಿಗಾಗಿ ಗ್ಯಾಸ್ ಏಜೆನ್ಸಿಗೆ ಜನರ ಲಗ್ಗೆ!!ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಾಗಿನಿಂದ ಹಳ್ಳಿಗರಿಗೂ ಎಲೆಕ್ಟ್ರಾನಿಕ್ ವಸ್ತುಗಳ ಪರಿಚಯ, ಬಳಕೆ, ಅರಿವು, ಅದರ ಸಂಕಷ್ಟ ಅನುಭವಿಸುವುದು ತಪ್ಪಿಲ್ಲ. ಇವುಗಳಲ್ಲೊಂದು ಇ-ಕೆವೈಸಿ. ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಇ-ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ಶಿವಮೊಗ್ಗ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ.