ಎಂಎಸ್ಎಂಇಗೆ ಲಭ್ಯವಿರುವ ಸವಲತ್ತು ಬಳಸಿಕೊಳ್ಳಿಕೃಷಿ ಬಿಟ್ಟರೆ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವಾಗಿದ್ದು, ಈ ವಲಯದಲ್ಲಿರುವ ಸವಲತ್ತುಗಳನ್ನು ಕೈಗಾರಿಕೋದ್ಯಮಿಗಳು ಬಳಕೆ ಮಾಡಿಕೊಳ್ಳಬೇಕೆಂದು ಎಂಎಸ್ ಎಂಇ ಜಂಟಿ ನಿರ್ದೇಶಕ ಡಾ. ಕೆ. ಸಾಕ್ರಟೀಸ್ ಹೇಳಿದರು.ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು, ರಫ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.