ಕೊಲೆಯತ್ನ ಪ್ರಕರಣ ಖಂಡಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ಸಂಬಂಧ ಭಾನುವಾರ ಇಬ್ಬರು ಮುಖಂಡರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ, ಇದು ಸರಿಯಲ್ಲ ಎಂದು ಸೋಮವಾರ ಬಿಜೆಪಿ, ಜೆಡಿಎಸ್ ಆರೋಪಿಸಿದೆ. ಅಲ್ಲದೇ, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ಸಹ ನಡೆಸಿದ್ದಾರೆ.