ಅಕ್ಷರ, ಅರಿವು, ಆಚಾರಗಳ ಪರಿಶುದ್ಧತೆ ಪ್ರೇರಕ ಅಂಬೇಡ್ಕರ್ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ. ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರರ ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.