• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಥ್ರೋಬಾಲ್‌: ಇಂದು ಜಿಲ್ಲಾಮಟ್ಟದ ಬಿಎಸ್‌ವೈ ಕಪ್‌ ಪಂದ್ಯಾವಳಿ
ಶಿವಮೊಗ್ಗ ಜಿಲ್ಲಾ ಥ್ರೋ ಬಾಲ್ ಅಸೋಸಿಯೇಷನ್ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆ.27ರಂದು ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ ಬಿ.ಎಸ್‌.ವೈ ಕಪ್‌ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಕೇಕ್‌ ಕತ್ತರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಗುವುದು. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಂದ್ಯಾವಳಿ ಉದ್ಘಾಟಿಸುವರು. ಎಂದು ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳೆಕೆರೆ ಹೇಳಿದ್ದಾರೆ.
65 ವರ್ಷಗಳಲ್ಲಿ ಆಗದ ರೈಲ್ವೆ ಅಭಿವೃದ್ಧಿ 10 ವರ್ಷದಲ್ಲಾಗಿದೆ: ಸಂಸದ ರಾಘವೇಂದ್ರ
ದೇಶದ ರೈಲ್ವೆ ಸಂಪರ್ಕ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯ ಬಂದು 65 ವರ್ಷಗಳಲ್ಲಿ ಆಗದ ಅಭಿವೃದ್ಧಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ 10 ವರ್ಷಗಳಲ್ಲಿ ಮಾಡಿದೆ. ಹಿಂದಿನ ವರ್ಷಗಳ ರೈಲ್ವೆ ಕಾಮಗಾರಿಗಳಿಗೆ ಹೋಲಿಸಿದರೆ, ಕಳೆದ 10 ವರ್ಷದಲ್ಲಿ ಶೇ.100ರಷ್ಟು ಹೆಚ್ಚಳವಾಗಿದೆ. 554 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಜೊತೆಗೆ 1500 ಮೇಲ್ಸೇತುವೆ, ಕೆಳಸೇತುವೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುತ್ತಿರುವ ಐತಿಹಾಸಿಕ ದಿನವಿದು ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮಾ.5ರಂದು ಶಕ್ತಿಸಾಗರ ಸಂಗಮ ಕಾರ್ಯಕ್ರಮ, ಯಡಿಯೂರಪ್ಪರಿಗೆ ಸನ್ಮಾನ
ಈಡಿಗ, ಬಿಲ್ಲವ, ನಾಮದಾರಿ, ದೀವರು ಮುಂತಾದ 26 ಪಂಗಡಗಳ ವತಿಯಿಂದ ಮಾ.5ರಂದು ಸಾಗರದ ಮಾರ್ಕೆಟ್ ಮೈದಾನದಲ್ಲಿ ಶಕ್ತಿ ಸಾಗರ ಸಂಗಮ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುವುದು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಸಮಾಜಗಳಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಮುಖ್ಯವಾಗಿ ಈಡಿಗ ಸಮಾಜದಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ, ಮಾಜಿ ಶಾಸಕ ಹರತಾಳು ಹಾಲಪ್ಪ ಸಾಗರದಲ್ಲಿ ಹೇಳಿದ್ದಾರೆ.
ಸಾಲ ಮರುಪಾವತಿಯಿಂದ ಸಹಕಾರ ಸಂಘ ಅಭಿವೃದ್ಧಿ ಸಾಧ್ಯ
ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದಾಗ ಸಹಕಾರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ. ಸಂಘಕ್ಕೆ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಂಡು ಸಂಘದ ಕ್ಷೇತ್ರವನ್ನು ವಿಸ್ತಾರ ಮಾಡಿಕೊಳ್ಳಬೇಕು. ಗ್ರಾಮದ ಪ್ರತಿಯೊಬ್ಬರು ಷೇರು ಹಾಕಿ ಖಾತೆ ತೆರೆದು, ನಿಯಮಿತವಾಗಿ ವ್ಯವಹರಿಸಬೇಕು ಎಂದು ಮಾಜಿ ಶಾಸಕ ಅಶೋಕ್‌ ನಾಯ್ಕ್‌ ಹೊಳೆಹೊನ್ನೂರಿನಲ್ಲಿ ಹೇಳಿದ್ದಾರೆ.
ವಿರೋಧ ಮಧ್ಯೆಯೇ ಬಹುಗ್ರಾಮ ಕುಡಿವ ನೀರು ಯೋಜನೆಗೆ ಚಾಲನೆ
ತೀರ್ಥಹಳ್ಳಿ ತಾಲೂಕಿಗೆ ಮಂಜೂರಾಗಿರುವ ₹344 ಕೋಟಿ ಅನುದಾನದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಜನವಿರೋಧ, ಪ್ರತಿಭಟನೆ ನಡುವೆಯೂ ಸೋಮವಾರ ಪೊಲೀಸ್‌ ಬಿಗಿ ಬಂದೋಬಸ್ತ್‌ನೊಂದಿಗೆ ಚಾಲನೆ ನೀಡಲಾಯಿತು. ಕೋಡ್ಲು ಗ್ರಾಮದ ಸ.ನಂ. 142ರಲ್ಲಿ ಈ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಬೆಳಗ್ಗಿನ ಜಾವ ಉದ್ದೇಶಿತ ಯೋಜನಾ ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆಗಳಿಗೆ ರೈತರು ಟ್ರ್ಯಾಕ್ಟರ್, ಕಾರು, ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸಲಾಗಿತ್ತು. ಬಳಿಕ ಕಾಮಗಾರಿಗೆ ಅಗತ್ಯವಾದ ಸರಕು, ವಾಹನ, ಜೆಸಿಬಿಗಳಿಗೆ ತೆರಳಲು ಅವಕಾಶ ಕಲ್ಪಿಸಿ, 70ಕ್ಕೂ ಹೆಚ್ಚು ಪೊಲೀಸ್ ಬಂದೋಬಸ್ತ್‌ನಲ್ಲಿ ಜಿಲ್ಲಾಡಳಿತ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಾಳೆ ಅಂಬ್ಲಿಗೊಳ್ಳ ಶಾಲೆಯಲ್ಲಿ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ
ಸಂವಿಧಾನ ಕರ್ತೃ ಅಂಬೇಡ್ಕರ್‌ ಅವರ ಸ್ಮರಣಾರ್ಥ ತಾಲೂಕಿನ ಅಂಬ್ಲಿಗೊಳ ಸರ್ಕಾರಿ ಶಾಲೆಯಲ್ಲಿ ಪ್ರತಿಮೆ ನಿರ್ಮಿಸುವ ಉತ್ತಮ ಕಾರ್ಯ ಸದ್ದಿಲ್ಲದೇ ನಡೆದಿದೆ. ಶಾಲೆ ಹಾಗೂ ಪೋಷಕರು, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಅರಿವು ಮೂಡಿಸುವುದು ಈ ಪ್ರಯತ್ನದ ಉದ್ದೇಶವಾಗಿದೆ. ಅಂಬ್ಲಿಗೊಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕ ಪಾಪಯ್ಯ ನೇತೃತ್ವದಲ್ಲಿ ಎಲ್ಲ ಶಿಕ್ಷಕರು, ಸ್ಥಳೀಯ ದಾನಿಗಳ ನೆರವಿನಿಂದ ಸಂವಿಧಾನ ಶಿಲ್ಪಿಯ ಅಂದಾಜು 13 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಫೆ.28ರಂದು ಲೋಕಾರ್ಪಣೆಗೆ ಸಕಲ ಸಿದ್ಧತೆ ನಡೆದಿದೆ. ಅಂದಾಜು ₹1.5 ಲಕ್ಷ ವೆಚ್ಚದಲ್ಲಿ ಈ ಪ್ರತಿಮೆ ಶಾಲೆ ಆವರಣದಲ್ಲಿ ತಲೆಯೆತ್ತಿ ನಿಲ್ಲಲಿದೆ.
ಅಧಿಕಾರ ಅವಧಿಯಲ್ಲಿ ಕ್ಷೇತ್ರ ಸಮಗ್ರ ಅಭಿವೃದ್ಧಿ: ಬಿವೈಆರ್
ಸಮುದಾಯ ಭವನಗಳು ಮಂಗಳ ಕಾರ್ಯದ ಮೂಲಕ ಸಂಬಂಧವನ್ನು ಬೆಸೆದು, ಎಲ್ಲರನ್ನು ಒಗ್ಗೂಡಿಸುವ ಪುಣ್ಯದ ಸ್ಥಳವಾಗಿರುತ್ತವೆ. ಈ ದಿಸೆಯಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಸಮುದಾಯ ಭವನ ನಿರ್ಮಿಸಿ ಎಲ್ಲ ಸಮುದಾಯ ಜನರ ಹಿತಕಾಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಮಹತ್ಕಾರ್ಯಕ್ಕೆ ತಾಲೂಕಿನ ಎಲ್ಲ ವರ್ಗದ ಜನತೆಯ ಬೆಂಬಲ ಬಹುಮುಖ್ಯ ಕಾರಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ರಾಮ ಜಪದಿಂದ ರೈತರ ಸಮಸ್ಯೆಗಳು ಬಗೆಹರಿಯಲ್ಲ
ರಾಮನ ಜಪದಿಂದ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲ. ಶಿಕ್ಷಣ, ನಿರುದ್ಯೋಗ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ದೇಶದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಮುಗ್ದ ಜನರನ್ನು ಒಗ್ಗೂಡಿಸುವ ಮೂಲಕ ಓಟ್ ಬ್ಯಾಂಕ್ ರಾಜಕಾರಣ ಮಾಡೋದನ್ನು ಇನ್ನಾದರೂ ಬಿಡಬೇಕು ಎಂದು ಸಮಾಜ ಚಿಂತಕ ಟಿ.ರಾಜಪ್ಪ ಮಾಸ್ತರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಸೊರಬದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಿಡಿಕಾರಿದರು.
ದಲಿತ ಸಂಘಟನೆಗಳ ಮೇಲೆ ಮಹತ್ತರ ಜವಾಬ್ದಾರಿ
ಸಮಾಜದಲ್ಲಿ ದಲಿತ ಸಂಘಟನೆಗಳ ಜವಾಬ್ದಾರಿ ಮಹತ್ತರವಾಗಿದೆ. ಸಂಘಟನೆಗಳನ್ನು ಸ್ಥಾಪಿಸುವುದು ಸುಲಭ. ಆದರೆ ತತ್ವ, ಸಿದ್ಧಾಂತದ ಜೊತೆಗೆ ನಿರಂತರವಾಗಿ ಮುನ್ನಡೆಸುವುದು ಸುಲಭವಲ್ಲ. ದಲಿತ ಸಂಘಟನೆಗಳ ಸ್ಥಾಪನೆ ಉತ್ತಮ ಬೆಳವಣಿಗೆ. ದಲಿತ ಸಂಘಟನೆಗಳಿಗೆ ಎಲ್ಲ ಜನಾಂಗದ ಪ್ರೋತ್ಸಾಹ ಸಿಗಬೇಕು. ಅಂಬೇಡ್ಕರ್ ಸೇನೆಗೆ ಸದಾ ಸ್ಪಂದಿಸಲು ಸಿದ್ಧ ಎಂದು ಭದ್ರಾವತಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣ ಜತೆಗೆ ಆತ್ಮರಕ್ಷಣೆ ಕಲೆಗಳೂ ಮುಖ್ಯ: ಶ್ರೀಪಾದ ಬಿಚ್ಚುಗತ್ತಿ
ಶೈಕ್ಷಣಿಕ ಪ್ರಗತಿಯ ಜತೆಗೆ ಸ್ವಾವಲಂಬನೆ, ಆತ್ಮರಕ್ಷಣೆಗೆ ಪೂರಕ ಆಗುವಂತಹ ಚಟುವಟಿಕೆಗಳನ್ನು ಮಕ್ಕಳಿಗೆ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು. ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಪೂರಕವಾಗಿ ಶಿಕ್ಷಣ ದೊರಕಬೇಕು. ಆಗ ಮಾತ್ರ ಗುಣಾತ್ಮಕ ಶಿಕ್ಷಣಕ್ಕೆ ಅರ್ಥ ಮೂಡುತ್ತದೆ. ವಿಶೇಷವಾಗಿ ಹಳೇ ಸೊರಬ ಸರ್ಕಾರಿ ಪ್ರೌಢಶಾಲೆ ಗ್ರಾಮಾಂತರ ಪ್ರದೇಶಗಳ ಮಕ್ಕಳ ಅಂತರ್ಗತ ಮೌಲ್ಯಗಳನ್ನು ಗುರುತಿಸಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಇತಿಹಾಸ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಸೊರಬದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 490
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved