ದೈಹಿಕ ಕ್ಷಮತೆ ಇದ್ದರಷ್ಟೇ ವೃತ್ತಿ ಬದುಕಿನಲ್ಲಿ ಯಶಸ್ಸು: ನ್ಯಾ.ಮಂಜುನಾಥ ನಾಯ್ಕ್3 ದಿನಗಳ ಕ್ರೀಡಾಕೂಟ, 9 ತಂಡಗಳು ಲಾಠಿ ಹಿಡಿದು ಸದಾ ಬಂದೋಬಸ್ತ್ನಲ್ಲಿದ್ದ ಪೊಲೀಸರು, ಕರ್ತವ್ಯದ ಒತ್ತಡ ಬಿಟ್ಟು ಮೈದಾನಕ್ಕೆ ಇಳಿದು, ಕ್ರೀಡೆಯಲ್ಲಿ ಪಾಲ್ಗೊಂಡರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಖಾಕಿ ಪಡೆ ರಿಲ್ಯಾಕ್ಸ್ ಮೂಡಿಗೆ ಜಾರಿತ್ತು. ಎಸ್ಪಿ ಜಿ.ಕೆ.ಮಿಥುನ್ಕುಮಾರ್ ನೇತೃತ್ವದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಮೇಲಾಧಿಕಾರಿಗಳು, ಕಿರಿಯರು ಎನ್ನದೇ ಎಲ್ಲರೂ ಸಮಾನವಾಗಿ ಆಟದಲ್ಲಿ ಪಾಲ್ಗೊಂಡರು. ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ 9 ತಂಡಗಳು ಪಾಲ್ಗೊಂಡಿವೆ. ಪ್ರತಿ ಕ್ರೀಡಾ ತಂಡಗಳು ಪ್ರದರ್ಶಿಸಿದ ಪಥಸಂಚಲನ ಗಮನ ಸೆಳೆಯಿತು.