• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಳ್ಳುವ ಶಕ್ತಿ ಇಲ್ಲದವರಿಗಾಗಿಯೇ ಗ್ಯಾರಂಟಿ ಯೋಜನೆಗಳ ಜಾರಿ
ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಕೊಳ್ಳುವ ಶಕ್ತಿಯಿಲ್ಲದವರ ಪರವಾದ ಯೋಜನೆಯಾಗಿವೆ. ವಿಶ್ವದಾದ್ಯಂತ ಈ ಯೋಜನೆ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇಂತಹ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುವ ಮೂಲಕ ಬೌದ್ಧಿಕ ದಿವಾಳಿತನ ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಟೀಕೆ ಮಾಡಿದ್ದಾರೆ.
26ರಂದು 4 ರೈಲು ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಶಂಕು
ಸುಮಾರು ₹26 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನಾಲ್ಕು ನಿಲ್ದಾಣಗಳಾದ ಶಿವಮೊಗ್ಗ, ಅರಸಾಳು, ಸಾಗರ-ಜಂಬಗಾರು ಹಾಗೂ ತಾಳಗುಪ್ಪ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಫೆ.26ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಮೃತ್ ಭಾರತ್ ಯೋಜನೆಯಡಿ ಫೆ.26ರಂದು ನಡೆಯುವ ಸಮಾರಂಭದಲ್ಲಿ ರಾಜ್ಯದ 55 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಮುಂದಿನ ಎರಡು ವರ್ಷದೊಳಗೆ ಈ ಕಾಮಗಾರಿ ಕೆಲಸಗಳು ಮುಗಿಯಲಿವೆ ಎಂದು ಇಲಾಖೆ ಸಹಾಯಕ ವಿಭಾಗೀಯ ಅಭಿಯಂತರ ಹರಿರಾಮ್ ಮೀನಾ ಸಾಗರ ಪಟ್ಟಣದಲ್ಲಿ ಹೇಳಿದ್ದಾರೆ.
27ರಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ಜಿಲ್ಲೆ ಬಂದ್
ದೆಹಲಿ ಗಡಿಯಲ್ಲಿ ಪಂಜಾಬ್ ಮತ್ತು ಹರಿಯಾಣ ರೈತರು ನಡೆಸುತ್ತಿರುವ ಅಹೋರಾತ್ರಿ ಹೋರಾಟವನ್ನು ಬೆಂಬಲಿಸಿ ಫೆ.27ರಂದು ಗ್ರಾಮ ಮತ್ತು ತಾಲೂಕು ಕೇಂದ್ರಗಳ ಬಂದ್ ಆಚರಿಸುವಂತೆ ರಾಜ್ಯ ರೈತ ಸಂಘ ಕರೆ ಕೊಟ್ಟಿದೆ. ಅದರಂತೆ ಈ ಬಂದ್ ದಿನ ಎಲ್ಲ ರೈತರು, ವಿವಿಧ ವ್ಯಾಪಾರ- ವಹಿವಾಟುದಾರರು, ವಿವಿಧ ಸಂಘ-ಸಂಸ್ಥೆಗಳು, ಮಹಿಳಾ ಸಂಘಟನೆಗಳು, ದಲಿತ ಕಾರ್ಮಿಕ ಸಂಘಟನೆಗಳು ಮತ್ತು ಲಾರಿ, ಟ್ಯಾಕ್ಸಿ, ಆಟೋ ಮಾಲೀಕರು, ಚಾಲಕರ ಸಂಸ್ಥೆಗಳು ಮತ್ತು ವಾಣಿಜ್ಯ ಸಂಸ್ಥೆಗಳ ಎಲ್ಲ ಮುಖ್ಯಸ್ಥರು ಬೆಂಬಲಿಸಿ, ಸಹಕರಿಸಬೇಕು ಎಂದು ರೈತ ನಾಯಕ ಕೆ.ಟಿ.ಗಂಗಾಧರ್ ಶಿವಮೊಗ್ಗದಲ್ಲಿ ಮನವಿ ಮಾಡಿದ್ದಾರೆ.
ಕಲ್ಲಿಗೆ ಜೀವ ತುಂಬುವ ಕಲಾವಿದ ಎಂದಿಗೂ ಆದರಣೀಯ: ರಂಗನಾಥ ಮೊಗವೀರ
ಕಲ್ಲು ಕಟೆದು, ದೈವಸ್ವರೂಪಿಯನ್ನು ಸೃಷ್ಠಿಸಿ, ಅದಕ್ಕೆ ಜೀವ ತುಂಬುವ ಕಲಾವಿದ ಭಕ್ತರ ಹೃದಯದಲ್ಲಿ ಎಂದಿಗೂ ಆದರಣೀಯ. ಕಠಿಣ ಕಲ್ಲುಗಳನ್ನು ಮೃದುವಾಗಿಸುವ ಕಲೆಗಾರಿಕೆ ತಿಳಿದಿರುವುದು ಶಿಲ್ಪಿಗಳಿಗೆ ಮಾತ್ರ. ಅವರು ದೈವತ್ವ ಭಾವನೆಗೆ ದೇವರ ಅನುಗ್ರಹದಿಂದ ಶಿಲ್ಪಿಗಳ ಉಳಿಯಲ್ಲಿ ಪರಮಾತ್ಮ ಎಲ್ಲವನ್ನೂ ಈಡೇರಿಸಿಕೊಳ್ಳುತ್ತಾನೆ. ಹಾಗಾಗಿ, ಜನರ ಭಾವನೆಗಳು ದೈವತ್ವ ಕಡೆ ಹೊರಳುವುದಕ್ಕೆ ಕಲಾವಿದರು ಕಾರಣಕರ್ತರು ಎಂದು ಯುವ ಬ್ರಿಗೇಡ್ ತಾಲೂಕು ಸಂಚಾಲಕ ರಂಗನಾಥ ಮೊಗವೀರ ಸೊರಬದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಕಲೆ, ಕಲಾವಿದರ ಉಳಿವಿಗೆ ಕಲಾ ಪೋಷಕರು ಅಗತ್ಯ
ಗ್ರಾಮೀಣ ನಾಟಕಗಳು ಮನೋಲ್ಲಾಸ ನೀಡುವುದರ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಜಾಗೃತಿ ಮೂಡಿಸುತ್ತವೆ. ಆದ್ದರಿಂದ ಕಲೆ, ಕಲಾವಿದರ ಉಳಿವಿಗೆ ಕಲಾಪೋಷಕರ ಅಗತ್ಯವಿದೆ. ನಾಟಕಗಳು ಪ್ರಾಚೀನ ಇತಿಹಾಸ ಹೊಂದಿವೆ. ಆದರೆ, ಕಲೆ ಮತ್ತು ಕಲಾವಿದರು ಕಣ್ಮರೆಯಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕಲೆಗಳು ಉಳಿಯಬೇಕಿವೆ. ಇದಕ್ಕೆ ನಗರ ಮತ್ತು ಗ್ರಾಮೀಣ ಪ್ರದೇಶದ ಕಲಾಪೋಷಕರು ಸಹಕರಿಸಬೇಕು ಎಂದು ಸೊರಬ ತಾಲೂಕಿನ ಶಾಂತಗೇರಿಯಲ್ಲಿ ಅಂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎ.ಎಸ್. ಹೇಮಚಂದ್ರ ಹೇಳಿದ್ದಾರೆ.
ನಾಳೆ ಸೋಂದಾ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ
ಶಿರಸಿ ತಾಲೂಕಿನ ಮಠದೇವಳದ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಫೆ.22ರಂದು ಶಿಷ್ಯ ಸ್ವೀಕಾರ ಮಹೋತ್ಸವ ಆಯೋಜಿಸಲಾಗಿದೆ ಎಂದು ವಕೀಲ ಅಶೋಕ್ ಜಿ. ಭಟ್ ಹೇಳಿದರು. ಸಾಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಮ್ಮ ಸಂಕಲ್ಪದಂತೆ ಮುಂದಿನ ಉತ್ತರಾಧಿಕಾರಿಯನ್ನಾಗಿ ಯಲ್ಲಾಪುರ ತಾಲೂಕಿನ ಈರಾಪುರದ ವೇದಬ್ರಹ್ಮ ನಾಗರಾಜ ಭಟ್ಟ ಅವರನ್ನು ಶಿಷ್ಯರನ್ನಾಗಿ ಸ್ವೀಕರಿಸಲು ನಿರ್ಧರಿಸಿದ್ದಾರೆ. ಶಿಷ್ಯ ಸ್ವೀಕಾರ ಬಳಿಕ ಅವರಿಗೆ ಬೇರೆಯದೇ ಹೆಸರು ನೀಡಲಾಗುತ್ತದೆ ಎಂದಿದ್ದಾರೆ.
ಇಂದಿನ ಆಡಳಿತಗಾರರಿಗೆ ಛತ್ರಪತಿ ಶಿವಾಜಿ ರಾಷ್ಟ್ರಭಕ್ತಿ ಪ್ರೇರಣೆಯಾಗಲಿ
ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಅವರ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಇಂದಿನ ಆಡಳಿತಗಾರರಿಗೆ ಪ್ರೇರಣಾಶಕ್ತಿ ಆಗಿದೆ. ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದು ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಸೊರಬ ತಾಲೂಕು ಮೂಡದೀವಳಿಗೆ ಗ್ರಾಮ ಮುಖಂಡ ಲೋಕೇಶ್ ಹೇಳಿದ್ದಾರೆ.
ಸಮಾಜದಲ್ಲಿ ಮಠ, ಗುರುಗಳ ಪಾತ್ರ ಮಹತ್ವದ್ದು: ಬಿವೈಆರ್‌
ಸದೃಢ ಸಮಾಜ ನಿರ್ಮಾಣದಲ್ಲಿ ಮಠ ಹಾಗೂ ಗುರುಗಳ ಪಾತ್ರ ಬಹು ಮುಖ್ಯವಾಗಿದೆ. ಸಾಕ್ಷಾತ್ ನಡೆದಾಡುವ ದೈವ ಎಂದು ಅನಾದಿ ಕಾಲದಿಂದ ಗುರುಗಳಿಗೆ ಸಮಾಜದಲ್ಲಿ ಉನ್ನತ ಸ್ಥಾನವನ್ನು ನೀಡಲಾಗಿದೆ. ಇತ್ತೀಚಿನ ವರ್ಷದಲ್ಲಿ ಮಠ, ಗುರುಗಳ ಬಗೆಗಿನ ನಿರ್ಲಕ್ಷ್ಯದಿಂದಾಗಿ ಸಮಾಜ ಅಧಃಪತನದತ್ತ ಸಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರ ತಾಲೂಕಿನ ಈಸೂರು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಮಂಗನಕಾಯಿಲೆಗೆ ಬಲಿ ಆದವರಿಗೆ ಪರಿಹಾರ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ದಿನೇಶ್‌ ಗುಂಡೂರಾವ್‌
ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ಪರಿಹಾರ ನೀಡಿರುವ ಹಿನ್ನೆಲೆಯಲ್ಲಿ ಈಗ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿಧಾನಸಭೆ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್‌. ಅರುಣ್‌ ಅವರು ಈ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಿಂದೆ ಮಂಗನ ಕಾಯಿಲೆಯಿಂದ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಪರಿಶೀಲಿಸುವ ಜತೆಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ವನ್ಯಜೀವಿಗಳ ಅಂಗಾಂಗ ಒಪ್ಪಿಸಲು ಏ.9ರವರೆಗೆ ಅವಕಾಶ
ವನ್ಯಜೀವಿ (ಸಂರಕ್ಷಣಾ) ಕಾಯ್ದೆಯಡಿ ರಾಜ್ಯ ಸರ್ಕಾರ ಹೊಸದಾಗಿ 2024 ನಿಯಮ ಜಾರಿಗೆ ತಂದಿದೆ. ಇದರ ಅನ್ವಯ ಮಾಲೀಕತ್ವ ಪ್ರಮಾಣ ಪತ್ರವಿಲ್ಲದ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳು, ಪದಾರ್ಥಗಳು ಹಾಗೂ ವಸ್ತುಗಳನ್ನು ಇಟ್ಟುಕೊಂಡಿರುವುದು ಶಿಕ್ಷಾರ್ಹ ಅಪರಾಧ. ಆದ್ದರಿಂದ ಅವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲು 2024ರ ಏ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹೇಳಿದ್ದಾರೆ.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved