ಸುಳ್ಳಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ ಭಾಷಾ ಸಮಸ್ಯೆಇಲ್ಲಿಯ ಸಮೀಪ ಸುಳ್ಳಳ್ಳಿ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಕೇವಲ ಹಿಂದಿ ಭಾಷೆಯಲ್ಲಿ ವ್ಯವಹರಿಸುತ್ತಿರುವುದು ಸ್ಥಳೀಯ ಗ್ರಾಹಕರು ಮತ್ತು ಸಹೋದ್ಯೋಗಿಗಳಿಗೆ ತೀವ್ರ ತೊಂದರೆಯುಂಟುಮಾಡಿದೆ. ಈ ಭಾಗದ ಬಹುತೇಕ ಜನರು ಕನ್ನಡ ಭಾಷೆ ಮಾತನಾಡುವವರಾಗಿದ್ದು, ಇದರಿಂದ ಸಾಲ ಪಡೆಯಲು, ಮರುಪಾವತಿ ಮಾಡಲು ಮತ್ತು ವ್ಯವಸ್ಥಾಪಕರೊಂದಿಗೆ ಸಂವಹನ ನಡೆಸಲು ಭಾರಿ ಅಡಚಣೆಯಾಗುತ್ತಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.