ಗ್ರಾಮೀಣ ಕ್ರೀಡಾಕೂಟಗಳು ಸಂಬಂಧವೃದ್ಧಿಗೆ ಸಹಕಾರಿಸನ್ಮಾನ ಸ್ವೀಕರಿಸಿದ ಶಿಕ್ಷಕ ಬಿ.ಮೂರ್ತಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಅದನ್ನು ಗುರುತಿಸಲು ಇಂತಹ ಕ್ರೀಡಾಕೂಟ ಸಹಕಾರಿ. ಈ ಭಾಗದಲ್ಲಿ ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರಿದ್ದಾರೆ. ಪ್ರತಿಭೆಗೆ ನಿರಂತರ ಪೋಷಣೆ ನೀಡಿದಾಗ ಉತ್ತಮ ಪ್ರಜೆಯಾಗಿ ಬೆಳೆಯುತ್ತಾರೆ ಎಂದು ಹೇಳಿದರು. ಮಂಡಳಿ ಅಧ್ಯಕ್ಷ ಗುರುದತ್ತ ಶರ್ಮ ಮಾತನಾಡಿದರು. ಹಿರಿಯ ಕೇರಂ ಆಟಗಾರ ಸೂರ್ಯನಾರಾಯಣ ಉಪಸ್ಥಿತರಿದ್ದರು. ಜಮ್ಮು- ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾ. ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಂತರ ರಾಷ್ಟ್ರೀಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಶೆಡ್ತಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಿ.ಮೂರ್ತಿ ಅವರನ್ನು ಸನ್ಮಾನಿಸಲಾಯಿತು.