ಅಧಿಕಾರಿ ನಿಂದಕ ಶಾಸಕ ಪುತ್ರನ ಬಂಧಿಸಿಭದ್ರಾವತಿ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರಿಗೆ ಒಂದು ಕಾನೂನು, ಕಾಂಗ್ರೆಸ್ ಪಕ್ಷದವರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಹೀನಾಯವಾಗಿ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಸ್ಥಳೀಯ ಶಾಸಕರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವ ಮೂಲಕ ಮೊಬೈಲ್ ಸಂಭಾಷಣೆಯ ಧ್ವನಿಯನ್ನು ಎಫ್ಎಸ್ಎಲ್ ಪರೀಕ್ಷೆಗೆ ಒಳಪಡಿಸಬೇಕೆಂದು ಚಲನಚಿತ್ರ ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.