• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಐಸಿಸಿಗೆ ಶಿಫಾರಸು ಪಟ್ಟಿಯಲ್ಲಿ ನನ್ನ ಹೆಸರೇ ಮೊದಲು: ದಿನೇಶ್
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಐಸಿಸಿಗೆ ಶಿಫಾರಸು ಮಾಡಿರುವ ಪಟ್ಟಿಯಲ್ಲಿ ನನ್ನ ಹೆಸರೇ ಮೊದಲು ಇದೆ. ನನಗೆ ಈಗಾಗಲೇ ಹೈಕಮಾಂಡ್ ಮೌಖಿಕವಾಗಿ ತಿಳಿಸಿ, ಕ್ಷೇತ್ರದಲ್ಲಿ ಓಡಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ, ನಾನು ಈಗಾಗಲೇ ಚುನಾವಣೆಯ ಕಣದಲ್ಲಿ ಇದ್ದೇನೆ. ಶೇ.100ರಷ್ಟು ಟಿಕೆಟ್ ನನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಎಸ್.ಪಿ. ದಿನೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸ್ವಾರ್ಥ ತೊರೆದು ಸಮಾಜಕ್ಕೆ ನೆರವಾದರೆ ಸಾರ್ಥಕತೆ
ಗಳಿಸಿದ್ದರಲ್ಲಿ ಸ್ವಲ್ಪವನ್ನಾದರೂ ಸಮಾಜ ಸೇವೆಗಾಗಿ ಮೀಸಲಿಟ್ಟಾಗ ಮನುಷ್ಯ ಜನ್ಮಕ್ಕೆ ಸಾರ್ಥಕತೆ ಬರುತ್ತದೆ, ಪುಣ್ಯ ಲಭಿಸುತ್ತದೆ. ಆದ್ದರಿಂದ ತಾನು, ತನಗೆ ಎನ್ನುವ ಸ್ವಾರ್ಥತೆಯನ್ನು ತೊರೆದು ಸಮಾಜದಲ್ಲಿ ಅತ್ಯಂತ ಕೆಳಸ್ಥರದಲ್ಲಿ ಬದುಕುತ್ತಿರುವವರನ್ನು ಗುರ್ತಿಸಿ ನೆರವಾಗುವುದರಿಂದ ಮನುಷ್ಯ ಜನ್ಮಕ್ಕೆ ಸಾರ್ಥಕತೆ ಮೂಡುತ್ತದೆ. ವ್ಯಕ್ತಿ ಅಥವಾ ಸಂಘ- ಸಂಸ್ಥೆಗಳನ್ನು ಹಣದಿಂದ ಅಳೆಯುವುದಿಲ್ಲ. ಸಮಾಜಕ್ಕೆ ತಮ್ಮ ಕೈಲಾದಷ್ಟು ಕೊಡುಗೆಯನ್ನು ನೀಡುವ ವ್ಯಕ್ತಿತ್ವದಿಂದ ಸಮಾಜವೇ ಗುರ್ತಿಸಿ ಪುರಸ್ಕರಿಸುತ್ತವೆ ಎಂದು ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್‌ ರಾಜ್ಯಾಧ್ಯಕ್ಷ ಎಸ್.ಜಿ. ರಾಮಚಂದ್ರ ಸೊರಬದಲ್ಲಿ ಹೇಳಿದ್ದಾರೆ.
ಕುವೆಂಪು ವಿವಿ ನೂತನ ಕುಲಸಚಿವರಾಗಿ ವಿಜಯ್‌ಕುಮಾರ್ ಅಧಿಕಾರ ಸ್ವೀಕಾರ
ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ಎಚ್‌.ಬಿ. ವಿಜಯ್‌ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಕುವೆಂಪು ವಿ.ವಿ.ಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ.2ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರ ಬೆಳಗ್ಗೆ ಕೆಎಎಸ್ ಅಧಿಕಾರಿ ವಿಜಯ್‌ಕುಮಾರ್ ನೂತನ ಕುಲಸಚಿವರಾಗಿ ಕರ್ತವ್ಯ ಆರಂಭಿಸಿದ್ದಾರೆ. ಇವರು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, 2014ರ ಬ್ಯಾಚ್‌ನಲ್ಲಿ ಕೆಎಎಸ್‌ಗೆ ಆಯ್ಕೆಯಾಗಿದ್ದಾರೆ.
ಕಾಗೋಡು ತಿಮ್ಮಪ್ಪ, ಹರನಾಥ ರಾವ್‌ ಹೋರಾಟ ನಮಗೆಲ್ಲ ದಾರಿದೀಪ: ಜಯಂತ್‌
ಕಾಗೋಡು ತಿಮ್ಮಪ್ಪ ಅವರು ಸಾಮಾನ್ಯ ಕುಟುಂಬದಿಂದ ಬಂದು ಲೋಹಿಯಾ, ಗೋಪಾಲಗೌಡರ ಸಿದ್ಧಾಂತ ಆದರ್ಶಗಳ ಮೂಲಕ ಹೋರಾಟದ ಕಿಚ್ಚಿನಲ್ಲಿ ಬೆಳೆದು ಸಮಾಜದ ಆಸ್ತಿಯಾಗಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪಡೆದಿರುವ ಹರನಾಥ ರಾವ್‌ ಅವರು ಕೈ-ಬಾಯಿ ಸ್ವಚ್ಛವಾಗಿಟ್ಟುಕೊಂಡವರು. ತಮ್ಮ ಕೈಲಿದ್ದುದನ್ನು ಕಳೆದುಕೊಂಡು ಸಾಲಗಾರರೇ ಆಗಿದ್ದರು. ಆದರೂ ಸಮಾಜಕ್ಕಾಗಿ ತಾವು ನಂಬಿದ ಆದರ್ಶಕ್ಕಾಗಿ ಹೋರಾಡುವ ಛಾತಿಯನ್ನು ಬಿಡಲಿಲ್ಲ. ಇವರಿಬ್ಬರ ನಡೆ, ನುಡಿ ಜನಪರ ಕೆಲಸ ಮಾಡುವವರಿಗೆ ದಾರಿದೀಪ ಆಗುತ್ತದೆ ಎಂದು ಸಾಮಾಜಿಕ ಚಿಂತಕ ಬಿ.ಆರ್. ಜಯಂತ್‍ ಸಾಗರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
19ರಂದು ಶಿರಾಳಕೊಪ್ಪದಲ್ಲಿ ಶಿವ-ಶಕ್ತಿ ಸಾಂಸ್ಕೃತಿಕ ವನ ಉದ್ಘಾಟನೆ
ಜಗತ್ತಿನಲ್ಲಿ ಮೊದಲಿಗೆ ವಿವಾಹವಾದದ್ದು ಶಿವ ಪಾವರ್ತಿಯದು ಎಂಬ ನಂಬಿಕೆ ಇದೆ. ಆದ್ದರಿಂದ ಇಲ್ಲಿ ಕಟ್ಟಿಸಲಾಗಿರುವ ಸಾಂಸ್ಕೃತಿಕ ವನ ಫೆ.19ರಂದು ಉದ್ಘಾಟಿಸಲಾಗುವುದು. ಶಿವಶರಣರ ಕ್ಷೇತ್ರ ಹಿನ್ನೆಲೆಯಲ್ಲಿ ವನಕ್ಕೆ ಶಿವ-ಶಕ್ತಿ ಸಾಂಸ್ಕೃತಿಕ ವನ ಎಂದು ಹೆಸರಿಡಬೇಕು ಎಂಬ ಚಿಂತನೆ ಮಾಡಲಾಗಿದೆ ಎಂದು ಶಿರಾಳಕೊಪ್ಪದಲ್ಲಿ ಶ್ರೀಶೈಲ ಜಗದ್ಗುರು ಚೆನ್ನಸಿದ್ದರಾಮ ಜಗದ್ಗುರು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಕಾಟಾಚಾರ ಬಜೆಟ್‌: ಸುಂದರೇಶ್
ಕೇಂದ್ರ ಸರ್ಕಾರದ ಬಜೆಟ್‌ ಕಾಟಾಚಾರ ಬಜೆಟ್‌ ಆಗಿದೆ. ಕೆಲವು ಉದ್ಯಮಿಗಳಿಗೆ ಗುತ್ತಿಗೆ ನೀಡಲು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದೆ. ಇದು ಅತ್ಯಂತ ಕಳಪೆ ಬಜೆಟ್. ಕಳೆದ ಬಜೆಟ್‌ನಲ್ಲಿ ಕೊರೋನಾದಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ₹20 ಸಾವಿರ ಕೋಟಿಯನ್ನು ಸಣ್ಣ ಕೈಗಾರಿಕೆಗಳಿಗೆ ಮೀಸಲು ಇಟ್ಟಿರುವುದಾಗಿ ಘೋಷಣೆ ಮಾಡಿದ್ದರು. ಆದರೆ, ಜಿಲ್ಲೆಯ ಯಾವ ಕೈಗಾರಿಕೆಗೂ ಇದರಿಂದ ಪ್ರಯೋಜನ ಆಗಲಿಲ್ಲ. 2022 ಗುಡಿಸಲು ಮುಕ್ತ ರಾಷ್ಟ್ರ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಈವರೆಗೂ ಜಿಲ್ಲೆಯಲ್ಲಿ ಒಂದು ಮನೆಯೂ ನಿರ್ಮಾಣ ಆಗಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್‌. ಸುಂದರೇಶ್ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.
ಹಿಂದುಗಳ ಶಕ್ತಿಯಾಗಿರುವ ಬಲಿಜ ಸಮಾಜ: ಶಾಸಕ ಚನ್ನಬಸಪ್ಪ
ಬಲಿಜ ಸಮಾಜ ಹಿಂದು ಸಮಾಜಕ್ಕೆ ಶಕ್ತಿ ಕೊಟ್ಟಿರುವ ಸಮಾಜ. ನಾವು ಸಣ್ಣವರು ಎಂಬ ಭಾವನೆ ಬಿಟ್ಟು ನಮ್ಮ ದೇಶ, ಕ್ಷೇತ್ರ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು. ಯಾವುದೇ ಸಮಾಜದ ಅಭಿವೃದ್ಧಿಗೆ ಸರ್ಕಾರಗಳು ಕಾರಣವಾಗುತ್ತವೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿದ ಕೊಡುಗೆಯಿಂದ ಅತ್ಯುತ್ತಮ ಭವನ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಸಮಾಜಗಳ ಏಳಿಗೆಗೆ ಮುಂದಾಗಬೇಕು ಎಂದು ಶಾಸಕ ಎಸ್‌.ಎನ್‌. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕೇಂದ್ರ ಅನುದಾನ ವಿಚಾರದಲ್ಲಿ ಸಿಎಂ ಶ್ವೇತಪತ್ರ ಹೊರಡಿಸಲಿ: ಈಶ್ವರಪ್ಪ ಹೇಳಿಕೆ
ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ಬರಬೇಕಿತ್ತು, ಯುಪಿಎ ಅವಧಿಯಲ್ಲಿ ಎಷ್ಟು ಬಂದಿದೆ. ಎನ್‌ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ. ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸಾಕಷ್ಟು ಅನುದಾನ ಬಂದಿಲ್ಲ. ಈ ಬಗ್ಗೆ ಶ್ವೇತಪತ್ರ ಹೊರಡಿಸುವುದಾಗಿ ಹೇಳಿದ್ದಾರೆ. ಆದರೆ, ಅವರು ಶ್ವೇತಪತ್ರ ಹೊರಡಿಸುವುದಿಲ್ಲ ಎಂದು ನನಗೆ ಗೊತ್ತು. ಅವರು ಬರೀ ಸುಳ್ಳು ಹೇಳುತ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅರಿವೇ ಗುರು ಎಂಬುದಕ್ಕೆ ಮಾಚಿದೇವರೇ ಜ್ವಲಂತ ನಿದರ್ಶನ
12ನೇ ಶತಮಾನದಲ್ಲಿ ಜಾತಿ ಪದ್ಧತಿ, ಅಸಮಾನತೆ ಪೆಡಂಭೂತದಂತೆ ಇತ್ತು. ದಾರ್ಶನಿಕರ, ಶರಣರ ಹೋರಾಟ ಪ್ರತಿಭಟನೆಯಿಂದ, ಆ ಧ್ವನಿಯಿಂದಾಗಿ ಇಂದು ನೆಮ್ಮದಿಯಿಂದ ಇದ್ದೇವೆ. ಒಬ್ಬ ವ್ಯಕ್ತಿಯ ಸನ್ನಡತೆ, ಉತ್ತಮ ವ್ಯಕ್ತಿತ್ವದಿಂದ ಮಾನ್ಯನಾಗುತ್ತಾನೆ. ಮಾಚಿದೇವ ಅವರ ಸನ್ನಡತೆಯಿಂದ ಬಿಜ್ಜಳ ಮಹಾರಾಜರೇ ಸ್ವತಃ ಅವರ ಮನೆಗೆ ಬರುತ್ತಾರೆ. ಎಷ್ಟೇ ಕಷ್ಟವಾದರೂ ನುಡಿದಂತೆ ನಡೆದ ಶ್ರೇಷ್ಠ ಪರಂಪರೆ ಮಾಚಿದೇವರ ಅವರದು. ಅಕ್ಕ ಮಹಾದೇವಿ ಸಹ ಮಾಚಿದೇವ ಅವರನ್ನು ತಮ್ಮ ತಂದೆ ಎನ್ನುತ್ತಾರೆ. ಇದು ನಮ್ಮ ಸಂಸ್ಕೃತಿಯ ಹೆಗ್ಗಳಿಕೆ ಎಂದ ಅವರು, ಅರಿವು ಇದ್ದರೆ ಗುರು ಆಗಬಹುದು ಎಂಬುದಕ್ಕೆ ಶ್ರೀ ಮಡಿವಾಳ ಮಾಚಿದೇವ ಅವರೇ ಜ್ವಲಂತ ನಿದರ್ಶನ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿಕ್ಷಣವಂತರಾಗಿ ಸಮಸಮಾಜ ನಿರ್ಮಾಣಕ್ಕಾಗಿ ಸಂಘಟಿತರಾಗಬೇಕು: ಕುಲಸಚಿವ ಡಾ.ಬಸವರಾಜ್
ಕಾನೂನು ಶಿಕ್ಷಣ ಸಮಾಜದ ಮೇಲೆ ಅತ್ಯಧಿಕ ಪರಿಣಾಮಗಳನ್ನು ಬೀರುತ್ತಿದೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ. ಸಮಾಜದಲ್ಲಿ ಅನೇಕರು ನಿಜವಾದ ನ್ಯಾಯದಿಂದ ವಂಚಿತರಾಗಿದ್ದಾರೆ. ವಂಚನೆಗೊಳಗಾದವರಿಗೆ ಸಂವಿಧಾನದ ಪ್ರತಿಯೊಂದು ಆಶಯಗಳು ತಲುಪುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲಿದೆ. ನಾವು ಕಲಿತ ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ ಎಂದು ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿ ಡಾ. ಸಿ.ಬಸವರಾಜ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved