• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಸಂಗೀತ ಕಾರ್ಯಕ್ರಮ
ಶಿವಮೊಗ್ಗ ನಗರದ ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಅಮೃತ ಮಹೋತ್ಸವ ಸಮಾರೋಪ ಅಂಗವಾಗಿ ಫೆಬ್ರವರಿ 1ರಿಂದ 4ರವರೆಗೆ ರವೀಂದ್ರ ನಗರದ ಬಲಮುರಿ ಶ್ರೀ ಗಣಪತಿ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 5.30ರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಎಚ್.ಆರ್.ಸುಬ್ರಮಣ್ಯ ಶಾಸ್ತ್ರಿ ಹೇಳಿದ್ದಾರೆ.
ಸಕ್ರೆಬೈಲ್ ಆನೆ ಬಿಡಾರಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ
ಬಿಡುವಿಲ್ಲದ ಕೆಲಸದ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಂಗಳವಾರ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಆನೆ ಬಿಡಾರಕ್ಕೆ ತೆರಳಿ ಅಲ್ಲಿನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಆನೆಗಳಿಗೆ ಬೆಲ್ಲ, ಬಾಳೆಹಣ್ಣು ತಿನ್ನಿಸಿ, ತುಂಗಾ ನದಿಯಲ್ಲಿ ದೋಣಿವಿಹಾರ ನಡೆಸಿದರು. ಬಿಡಾರದಲ್ಲಿ ಕಾರ್ಯನಿರ್ವಹಿಸುವ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.
ಕೆರೆಹಳ್ಳಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕಾರ
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ವಿಧಿಸುತ್ತಿರುವ ಮನೆ, ನಿವೇಶನ, ಸಣ್ಣ ಕೈಗಾರಿಕೆಗಳು, ಅಂಗಡಿಗಳ ಪರಿಷ್ಕೃತ ತೆರಿಗೆ ದುಪ್ಪಾಟ್ಟಾಗಿದೆ. ಇದರಿಂದ ಕೂಲಿ ಕಾರ್ಮಿಕರು, ರೈತರು, ಬಡವರಿಗೆ ಕಷ್ಟವಾಗುತ್ತಿದೆ. ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ತೆರಿಗೆ ಪರಿಷ್ಕರಣೆ ಮರುಪರಶೀಲನೆ ನಡೆಸಿ, ಈ ಹಿಂದಿನ ಕಂದಾಯ ಪದ್ಧತಿಯನ್ನೇ ಮರುಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರ ಪರವಾಗಿ ಜೆ.ಎಸ್.ಚಂದ್ರಪ್ಪ ಅವರು ಕೆರೆಹಳ್ಳಿ ಹೋಬಳಿಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದರು.
ಶೀಘ್ರ ಕಡತ ವಿಲೇವಾರಿಗೆ ಮುಕ್ತ ವಾತಾವರಣ ಅಗತ್ಯ: ಮಧು ಬಂಗಾರಪ್ಪ
ಸರ್ಕಾರಿ ನೌಕರರು ಯಾವುದೇ ಒತ್ತಡ ಇಲ್ಲದೇ ಕಾರ್ಯನಿರ್ವಹಿಸುವ ಮುಕ್ತ ವಾತಾವರಣ ಕಲ್ಪಿಸಿದಾಗ ಸಾರ್ವಜನಿಕರ ಕಡತಗಳು ಶೀಘ್ರ ವಿಲೇವಾರಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿ ಜತೆ ಸಹಕರಿಸಬೇಕಿದೆ ಎಂದು ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.
ನಾಳೆಯಿಂದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.1 ಮತ್ತು 2ರಂದು ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಸ್.ಪಿ. ಪದ್ಮಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್‌ ಹೇಳಿದ್ದಾರೆ.
ಪ್ರಜಾಪ್ರಭುತ್ವ ನಮಗೆ ಊರುಗೋಲು ಆಗಬೇಕು: ಮೇಟಿ ಮಲ್ಲಿಕಾರ್ಜುನ
ಪ್ರಜಾಪ್ರಭುತ್ವ ನಮ್ಮನ್ನು ಕೈಹಿಡಿದು ನಡೆಸುವ ಊರು ಗೋಲಾಗಬೇಕು. ಪ್ರಜಾಪ್ರಭುತ್ವದಲ್ಲಿ ಹಕ್ಕು ಮತ್ತು ಆದ್ಯತೆಗಳನ್ನು ಸಮಾನವಾಗಿ ಕಾಣಬೇಕು. ಪ್ರಜಾಪ್ರಭುತ್ವ ಪ್ರಸ್ತುತ ಅಸ್ತ್ರವಾಗಿ ಬಳಕೆ ಆಗುತ್ತಿದೆ. ಜಾತಿ, ಧರ್ಮವನ್ನು ಮೀರಿ ಪ್ರಜಾಪ್ರಭುತ್ವವನ್ನು ಒಪ್ಪಿಕೊಳ್ಳಬೇಕು. ಆಗ ಮಾತ್ರ ಅದನ್ನು ದಿವ್ಯಶಕ್ತಿಯಾಗಿ ಕಾಣಬಹುದು. ಇಲ್ಲವಾದರೆ, ವ್ಯವಸ್ಥೆಯಲ್ಲಿ ವ್ಯಂಗ್ಯಭಾವ ಮೂಡುತ್ತದೆ ಎಂದು ಸಹ್ಯಾದ್ರಿ ಕಲಾ ಕಾಲೇಜು ಭಾಷಾಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮೇಟಿ ಮಲ್ಲಿಕಾರ್ಜುನ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಫಲಾಪೇಕ್ಷೆ ಬಯಸದ ಸಂಘ-ಸಂಸ್ಥೆಗೆ ಸಮಾಜ ಪುರಸ್ಕಾರ
ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿದ ಸಂಘ-ಸಂಸ್ಥೆಗಳು ಫಲಾಪೇಕ್ಷೆ ಇಲ್ಲದೇ ನಿಜವಾದ ಕಾಳಜಿ ಮತ್ತು ಉದ್ಧೇಶ ಹೊಂದಿದಾಗ ಸಮಾಜವೇ ಗುರುತಿಸಿ ಪುರಸ್ಕರಿಸುತ್ತದೆ. ಈ ನಿಟ್ಟಿನಲ್ಲಿ ಕಳೆದ 30 ವರ್ಷಗಳಿಂದ ತನ್ನದೇ ಆದ ಸಮಾಜ ಸೇವೆಯಲ್ಲಿ ತೊಡಗಿರುವ ಯುವಜನ ಸಂಘದ ಕಾರ್ಯವೈಖರಿ ಶ್ಲಾಘನೀಯ ಎಂದು ಕನ್ನಡ ಚಲನಚಿತ್ರ ನಟ ನಾಗೇಶ್ವರ ವಿಜಯಪುರ ಸೊರಬ ತಾಲೂಕು ಕೋಟಿಪುರದಲ್ಲಿ ಹೇಳಿದ್ದಾರೆ.
ಇಂದು ಶಂಕಿತ ನಕ್ಸಲ್ ಕೃಷ್ಣಮೂರ್ತಿ ಕೋರ್ಟ್‌ಗೆ?
ಕೇರಳ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕುಖ್ಯಾತ ಶಂಕಿತ ನಕ್ಸಲ್ ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಈಗಾಗಲೇ ಕೇರಳ ಜೈಲಿನಲ್ಲಿ ಇರುವ ನಕ್ಸಲ್ ಕೃಷ್ಣಮೂರ್ತಿಯನ್ನು ಬಾಡಿ ವಾರೆಂಟ್ ಮೇಲೆ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಶಿವಮೊಗ್ಗದತ್ತ ಕರೆ ತರುತ್ತಿದ್ದಾರೆ. ರಾತ್ರಿ ಶಿವಮೊಗ್ಗ ತಲುಪುವ ಸಾಧ್ಯತೆ ಇದ್ದು, ರಾತ್ರಿಯೇ ಎಲ್ಲ ಪ್ರಕ್ರಿಯೆ ಮುಗಿಸಿ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್‌ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ದೇಶದಲ್ಲಿ ಹಿಂದು, ಮುಸ್ಲಿಮರೆಲ್ಲ ಸಹೋದರರಂತೆ ಬಾಳಬೇಕು
ದೇಶದ ಹಿಂದು ಮುಸ್ಲಿಂ ಎಲ್ಲರೂ ಒಂದೇ, ಎಲ್ಲರ ರಕ್ತದ ಬಣ್ಣವೂ ಒಂದೇ. ನಾವೆಲ್ಲರೂ ಪರಸ್ಪರ ಸಹೋದರರಂತೆ ಇರಬೇಕಿದೆ. ನಾವು ದೇಶ ಕಟ್ಟಬೇಕೇ ಹೊರತು, ತುಂಡು ಮಾಡಬಾರದು ಎಂದು ಸಾದಿಯಾ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಅಹಮದ್ ಹುಸೇನ್ ಹಾಫೀಜ್ ಕರ್ನಾಟಕಿ ಶಿರಾಳಕೊಪ್ಪದಲ್ಲಿ ಹೇಳಿದರು.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved