ಮೂಲಭೂತ ಹಕ್ಕುಗಳ ಹೊಂದಲು ಸಂವಿಧಾನ ಸಹಾಯಕ: ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆಭಾರತ ಸಂವಿಧಾನವು ರಷ್ಯಾ, ಬ್ರಿಟನ್ ಹಾಗೂ ಅಮೆರಿಕ ದೇಶಗಳ ಸಂವಿಧಾನಗಳ ಅಂಶಗಳನ್ನು ಒಳಗೊಂಡಿದೆ. ಡಾ.ಅಂಬೇಡ್ಕರ್ ದೇಶಕೆ ಸುಭದ್ರವಾದ ಸಂವಿಧಾನ ನೀಡಿದ್ದು, ಇದು ಪ್ರಪಂಚದಲ್ಲೇ ಬೃಹತ್ ಸಂವಿಧಾನ ಎನಿಸಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಹೊಂದಲು ಸಂವಿಧಾನ ಸಹಾಯಕವಾಗಿದೆ. ನಮ್ಮ ಸಂವಿಧಾನವನ್ನು ರಚಿಸಿ, ಜಾರಿಗೆ ತಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಹೇಳಿದ್ದಾರೆ.