29ರಂದು ಭದ್ರಾವತಿಯಲ್ಲಿ ಜಿಲ್ಲಾ ಸಚಿವರಿಂದ ನೂತನ ಕಟ್ಟಡಗಳ ಉದ್ಘಾಟನೆಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ, ಸಿದ್ಧಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಜ.29ರಂದು ಸಂಜೆ 5.30 ಗಂಟೆಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಉದ್ಘಾಟನೆ, ಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿದ್ಯಾಸಂಸ್ಥೆ ಹಾಗೂ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಭದ್ರಾವತಿಯಲ್ಲಿ ಹೇಳಿದ್ದಾರೆ.