ಸೇವಾಸಿಂಧು ಸೌಲಭ್ಯಗಳಿಗೆ ಹೆಸರು ನೋಂದಾಯಿಸಿ: ಶರಣಪ್ರಕಾಶ ಪಾಟೀಲಯುವನಿಧಿ ಯೋಜನೆಗೆ ಈಗಾಗಲೇ ಸುಮಾರು 70 ಸಾವಿರ ವಿದ್ಯಾರ್ಥಿ ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದು, ಈ ವರ್ಷ ಪದವಿ ಮುಗಿಸಿರುವ ಸುಮಾರು 5 ಲಕ್ಷ ವಿದ್ಯಾರ್ಥಿಗಳೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಯುವಜನತೆ ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯಕ್ರಮಕ್ಕೆ ಸೇವಾಸಿಂಧು ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.