• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶ್ವರಾನಂದಪುರ ಶ್ರೀಗೆ ಅವಮಾನ ಕುರಿತು ಸಿಎಂ ತನಿಖೆಗೆ ಸೂಚಿಸಲಿ: ಈಶ್ವರಪ್ಪ ಆಗ್ರಹ
ಈಶ್ವರಾನಂದಪುರಿ ಸ್ವಾಮೀಜಿಗೆ ಅವಮಾನ ಆಗಿದ್ದರೆ ಅದು ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಸ್ವಾಮೀಜಿ ಅವರಿಗೆ ಚನ್ನಕೇಶವ ದೇವಾಲಯದ ಗರ್ಭಗುಡಿಯಲ್ಲಿ ಪೂಜೆ ಮಾಡಿ, ತೆರಳಿದ ನಂತರ ಅಲ್ಲಿನ ಅರ್ಚಕರು ಸ್ವಚ್ಛತೆ ಮಾಡಿದ್ದಾರೆ ಎಂದು ನೋವು ತೋಡಿಕೊಂಡಿರುವುದು ಗಮನಕ್ಕೆ ಬಂದಿದೆ. ಅರ್ಚಕರು ಈ ಬಗ್ಗೆ ಸ್ಪಷ್ಟನೆ ನೀಡಿ, ನಾವು ಈಶ್ವರಾನಂದಪುರಿ ಶ್ರೀಗಳಿಗೆ ಸಕಲ ಗೌರವ ನೀಡಿದ್ದೇವೆ. ಅವರು ಯಾಕೆ ಆ ರೀತಿ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿಯದು ಎಂದಿದ್ದಾರೆ. ಹಾಗಾದರೆ, ಎಲ್ಲಿ ಗೊಂದಲ ಆಯಿತು ಎಂಬುದು ಬಹಿರಂಗ ಆಗಬೇಕು. ಶ್ರೀಗಳು ಕನಕದಾಸರ ಅನುಯಾಯಿಗಳು ಆಗಿದ್ದು, ಮುಖ್ಯಮಂತ್ರಿ ಅವರು ಈ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲಿಗೆ ಎಳೆಯಬೇಕು. ಈ ಘಟನೆ ಸತ್ಯವಾಗಿದ್ದರೆ ಸಂಬಂಧಪಟ್ಟವರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇದು ಸತ್ಯವಾಗಿಲ್ಲವೆಂದರೆ ಇದಕ್ಕೆ ಕಾರಣವಾದರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಒತ್ತಾಯಿಸಿದ್ದಾರೆ.
11ರಂದು ರಾಜ್ಯಮಟ್ಟದ ಮಹಿಳಾ ಸ್ವಸಹಾಯ ಸಂಘಗಳ ಸಮಾವೇಶ
ಶಿಕಾರಿಪುರ ಪಟ್ಟಣದ ಹೊಸ ಸಂತೆ ಮೈದಾನದಲ್ಲಿ ಫೆ.11ರಂದು ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ರಾಜ್ಯಮಟ್ಟದ ಮಹಿಳಾ ಸ್ವಸಹಾಯ ಸಂಘಗಳ ಬೃಹತ್ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಘ ಬೃಹತ್ ಆರ್ಥಿಕ ಚಟುವಟಿಕೆಗಳ ಮೂಲ ಉದ್ದೇಶಕ್ಕೆ ಪೂರಕವಾಗಿ ಕಾರ್ಯಚಟುವಟಿಕೆ ಮೂಲಕ ಗುರುತಿಸಿಕೊಂಡಿದೆ. ಹಳೇಬೀಡು ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಕೃಪಾಶೀರ್ವಾದದಲ್ಲಿ ಸಂಘ ಉತ್ತಮವಾಗಿ ಮುನ್ನಡೆದಿದೆ. ಸಮಾವೇಶದಲ್ಲಿ ಅಂದಾಜು 15 ಸಾವಿರ ಅಧಿಕ ಮಹಿಳೆಯರು ಆಗಮಿಸಲಿದ್ದಾರೆ. ಅಗತ್ಯವಾದ ಊಟ, ವಸತಿಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಾಲೂಕು ನೊಳಂಬ ವೀರಶೈವ ಸಮಾಜ ಅಧ್ಯಕ್ಷ ಲೋಹಿತ್ ಹೇಳಿದ್ದಾರೆ.
ಹೃದಯ ಭಾಷೆಯಾಗಿ ಕನ್ನಡ ಆರಾಧಿಸಬೇಕು: ಸಚಿವ ಮಧು
ಎಲ್ಲ ಭಾಷೆಗಳಿಗಿಂತ ಸರಳ ಮತ್ತು ಸುಲಲಿತ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಹೃದಯದ ಭಾಷೆಯಾಗಿ ಸ್ವೀಕರಿಸಿ ಆರಾಧಿಸಬೇಕು. ಕನ್ನಡ ನಾಡಿನ ನೆಲ, ಜಲ, ಭಾಷೆಯ ಭಾವೈಕ್ಯತೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸೈನಿಕರ ರೀತಿಯಲ್ಲಿ ಕಟಿಬದ್ಧರಾಗಿ ಹೋರಾಡುವ ಅಗತ್ಯವಿದೆ. ಎಲ್ಲೇ ಇದ್ದರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇತರೆ ಭಾಷೆಗಳನ್ನು ವ್ಯಾವಹಾರಿಕವಾಗಿ ಬಳಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.
ಶರಾವತಿ ವಿದ್ಯುತ್ ಉತ್ಪಾದನೆ ವಿಭಾಗದಲ್ಲಿ ₹8,500 ಕೋಟಿ ವೆಚ್ಚದಲ್ಲಿ ಪಂಪ್ ಸ್ಟೋರೇಜ್
ಶರಾವತಿ ವಿದ್ಯುತ್ ಉತ್ಪಾದನೆ ವಿಭಾಗದಲ್ಲಿ ₹8,500 ಕೋಟಿ ವೆಚ್ಚದಲ್ಲಿ ಪಂಪ್ ಸ್ಟೋರೇಜ್ ನಿರ್ಮಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ. ಲಿಂಗನಮಕ್ಕಿ ಅಣೆಕಟ್ಟೆಯಿಂದ ಜಲವಿದ್ಯುತ್ ಉತ್ಪಾದಿಸಿದ ನೀರು ವಾಪಸ್ ನದಿಗೆ ಹರಿಸದೇ, ಅದನ್ನು ಮರುಬಳಕೆ ಮಾಡಲು ಪಂಪ್ ಸ್ಟೋರೇಜ್ ಮಾಡಲಾಗುತ್ತಿದೆ. ಇದರಿಂದ 24 ಗಂಟೆಯೂ ವಿದ್ಯುತ್ ಉತ್ಪಾದನೆ ಮಾಡಬಹುದು. ಶರಾವತಿ ಅಲ್ಲದೇ ವಾರಾಹಿಯಲ್ಲೂ ಪಂಪ್ ಸ್ಟೋರೇಜ್ ನಿರ್ಮಿಸಿ, ಹೆಚ್ಚು ವಿದ್ಯುತ್ ಉತ್ಪಾದನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಇರುವ ವಿದ್ಯುತ್ ಅಭಾವ ನೀಗಿಸಲು ಕ್ರಮ ತೆಗೆದುಕೊಂಡಿದ್ದೇವೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ರೈತರ ಕೃಷಿ ಸೋಲಾರ್‌ ವ್ಯವಸ್ಥೆಗೆ ಸರ್ಕಾರದಿಂದ ಶೇ.80 ಸಹಾಯಧನ: ಸಚಿವ ಕೆ.ಜೆ.ಜಾರ್ಜ್
ರೈತರು ಕೃಷಿ ವಿದ್ಯುತ್‍ಗಾಗಿ ಸೋಲಾರ್ ವ್ಯವಸ್ಥೆ ನಿರ್ಮಿಸಿಕೊಳ್ಳುವವರಿಗೆ ಸರ್ಕಾರದಿಂದ ಶೇ.80ರಷ್ಟು ಸಹಾಯಧನ ನೀಡಲಾಗುವುದು. ಹೊಳಲೂರು ಮತ್ತು ಬೆಜ್ಜವಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 220 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪಿಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲಾಗುವುದು. ಶರಾವತಿ, ವಾರಾಹಿ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಖುದ್ದು ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ. ಪರಿಸರಸ್ನೇಹಿ ಗ್ರೀನ್ ಹೈಡ್ರೋಜನ್ ಪವರ್ ಉತ್ಪಾದಿಸುತ್ತಿರುವ ಉತ್ತರ ಕರ್ನಾಟಕದ ಆಯ್ದ ಜಿಲ್ಲೆಗಳ ವಿದ್ಯುತ್‍ನ್ನು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕೆಎಫ್‌ಡಿಗೆ ಮುಂದಿನ ಅವಧಿಗೆ ಹೊಸ ಲಸಿಕೆ ಲಭ್ಯ ಸಾಧ್ಯತೆ: ಡಿ.ರಣದೀಪ್
ಕೆಎಫ್‌ಡಿಗೆ ಹೊಸ ಲಸಿಕೆ ಪ್ರಕ್ರಿಯೆಯಲ್ಲಿದ್ದು, ಮುಂದಿನ ಅವಧಿಗೆ ಲಭ್ಯವಾಗುವ ಸಾಧ್ಯತೆ ಇದೆ. ಒಟ್ಟು 2,288 ಮಂದಿಗೆ ಕೆಎಫ್‌ಡಿ ಪರೀಕ್ಷೆ ನಡೆಸಲಾಗಿದೆ. ಶಿವಮೊಗ್ಗದಲ್ಲಿ 12, ಉತ್ತರ ಕನ್ನಡ 34 ಹಾಗೂ ಚಿಕ್ಕಮಗಳೂರಿನಲ್ಲಿ 3 ಸೇರಿ ಒಟ್ಟು 49 ಪಾಸಿಟಿವ್ ಪ್ರಕರಣ ವರದಿಯಾಗಿವೆ. ಪಾಸಿಟಿವ್‌ ಪ್ರಕರಣಗಳ ಪೈಕಿ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಂದು ಮರಣ ಸಂಭವಿಸಿದೆ. ಕೆಎಫ್‌ಡಿ ಪೀಡಿತ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳು ಕಂಡುಬಂದಲ್ಲಿ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು. ವೈದ್ಯಾಧಿಕಾರಿಗಳು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಣದೀಪ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅಧಿಕಾರ ಸ್ವೀಕಾರಕ್ಕೂ ಮೊದಲೇ ಕುವೆಂಪು ವಿವಿ ಕುಲಸಚಿವರ ಬದಲು!
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ಪಿ.ಶಿವರಾಜು ಅವರನ್ನು ನೇಮಿಸಿ ಜ.31ರಂದು ಆದೇಶ ಹೊರಡಿಸಿದ್ದ ಸರ್ಕಾರ, ಅವರು ಅಧಿಕಾರ ಸ್ವೀಕರಿಸುವ ಮುನ್ನವೇ ಪುನಃ ಆದೇಶ ಬದಲಿಸಿದೆ. ಪಿ.ಶಿವರಾಜು ಬದಲಿಗೆ ಕೆಎಎಸ್‌ ಅಧಿಕಾರಿ (ಕಿರಿಯ ಶ್ರೇಣಿ) ಎಚ್‌.ವಿ. ವಿಜಯಕುಮಾರ್‌ ಅವರನ್ನು ಕುಲಸಚಿವರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಜೀವನೋತ್ಸಾಹಕ್ಕೆ ಸಾಹಿತ್ಯ ಸಮ್ಮೇಳನಗಳು ಪೂರಕ
ಎಲ್ಲವನ್ನೂ ಪ್ರಶ್ನಿಸುವ ಕಾಲಮಾನದಲ್ಲಿ ನಾವಿದ್ದೇವೆ. ಆಧುನಿಕತೆ ನಮ್ಮನ್ನು ನಿಯಂತ್ರಿಸಲು ಪ್ರಾರಂಭಿಸಿದೆ. ಅನಗತ್ಯ ಆತಂಕ ಗೊಂದಲ ಕುತೂಹಲಗಳಿಗೆ ಆಧುನಿಕ ಸಾಧನ ಮೊಬೈಲ್ ಫೋನ್ ನಿರ್ಮಾಣ ಮಾಡುತ್ತಿದೆ. ಧಾರಾವಾಹಿಗಳು ನಮ್ಮಲ್ಲಿ ಹೆಣ್ಣಿನ ಬಗೆಗೆ ಖಳನಾಯಕಿಯಂತೆ ಬಿಂಬಿಸುತ್ತಿದ್ದಾರೆ. ಜೀವನ ಉತ್ಸಾಹವನ್ನು ಉನ್ನತೀಕರಿಸಲು ಸಾಹಿತ್ಯ ಸಮ್ಮೇಳನಗಳು ಪೂರಕ ಎಂದು ಸಾಹಿತಿ ಡಾ.ಪ್ರಶಾಂತ್ ನಾಯಕ್ ಶಿವಮೊಗ್ಗದ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಹೇಳಿದ್ದಾರೆ.
ಡಿಕೆಸು, ಡಿಕೆಶಿ ಅವರದು ಜಿನ್ನಾ ಸಂಸ್ಕೃತಿ: ಈಶ್ವರಪ್ಪ ಕಿಡಿ
ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರದು ಜಿನ್ನಾ ಸಂಸ್ಕೃತಿ. ಕೇಂದ್ರ ಸರ್ಕಾರದಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ ಎಂದು ಡಿ.ಕೆ.ಸುರೇಶ್‌ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು ಎತ್ತಿದ್ದಾರೆ. ಈ ಹಿಂದೆ ಇದೇ ಕಾಂಗ್ರೆಸ್‌ನವರು ಕೇವಲ ಅಧಿಕಾರಕ್ಕಾಗಿ ಹಿಂದೂಸ್ತಾನ- ಪಾಕಿಸ್ತಾನ ಅಂತಾ ಒಡೆದು ದೇಶವನ್ನು ಎರಡು ಭಾಗ ಮಾಡಿದ್ದರು. ಹಿಂದೂ, ಮುಸ್ಲಿಂ ಎಲ್ಲರೂ ಒಟ್ಟಾಗಿ ಇದ್ದಾಗ ದೇಶ ವಿಭಜನೆ ಆಯ್ತು. ಕಾಂಗ್ರೆಸ್ ನಾಯಕರದ್ದು ಒಂದು ರೀತಿಯ ಜಿನ್ನಾ ಸಂಸ್ಕೃತಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ತರ ಜಮೀನು ಕಬಳಿಕೆ ವಿರುದ್ಧ ಕ್ರಮಕ್ಕೆ ಒತ್ತಾಯ
ಸಾಗರ ತಾಲೂಕಿನ ಮಲಂದೂರು ಗ್ರಾಮದ ಸರ್ವೆ ನಂ.157ರಲ್ಲಿ ಏಳು ಮಂದಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಲಾಗಿದ್ದ ಸರ್ಕಾರಿ ಭೂಮಿಯನ್ನು, ನಕಲಿ ದಾಖಲೆ ಸೃಷ್ಟಿಸಿ ಕಿತ್ತುಕೊಳ್ಳುವ ಪ್ರಯತ್ನ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ನೇತೃತ್ವದಲ್ಲಿ ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved