• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಶಂಕಿತ ನಕ್ಸಲ್ ಕೃಷ್ಣಮೂರ್ತಿ ಕೋರ್ಟ್‌ಗೆ?
ಕೇರಳ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕುಖ್ಯಾತ ಶಂಕಿತ ನಕ್ಸಲ್ ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಈಗಾಗಲೇ ಕೇರಳ ಜೈಲಿನಲ್ಲಿ ಇರುವ ನಕ್ಸಲ್ ಕೃಷ್ಣಮೂರ್ತಿಯನ್ನು ಬಾಡಿ ವಾರೆಂಟ್ ಮೇಲೆ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಶಿವಮೊಗ್ಗದತ್ತ ಕರೆ ತರುತ್ತಿದ್ದಾರೆ. ರಾತ್ರಿ ಶಿವಮೊಗ್ಗ ತಲುಪುವ ಸಾಧ್ಯತೆ ಇದ್ದು, ರಾತ್ರಿಯೇ ಎಲ್ಲ ಪ್ರಕ್ರಿಯೆ ಮುಗಿಸಿ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್‌ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ದೇಶದಲ್ಲಿ ಹಿಂದು, ಮುಸ್ಲಿಮರೆಲ್ಲ ಸಹೋದರರಂತೆ ಬಾಳಬೇಕು
ದೇಶದ ಹಿಂದು ಮುಸ್ಲಿಂ ಎಲ್ಲರೂ ಒಂದೇ, ಎಲ್ಲರ ರಕ್ತದ ಬಣ್ಣವೂ ಒಂದೇ. ನಾವೆಲ್ಲರೂ ಪರಸ್ಪರ ಸಹೋದರರಂತೆ ಇರಬೇಕಿದೆ. ನಾವು ದೇಶ ಕಟ್ಟಬೇಕೇ ಹೊರತು, ತುಂಡು ಮಾಡಬಾರದು ಎಂದು ಸಾದಿಯಾ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಅಹಮದ್ ಹುಸೇನ್ ಹಾಫೀಜ್ ಕರ್ನಾಟಕಿ ಶಿರಾಳಕೊಪ್ಪದಲ್ಲಿ ಹೇಳಿದರು.
ಶ್ರೀರಾಮನನ್ನು ಬೀದಿಗೆ ತಂದು ನಿಲ್ಲಿಸಿದ್ದು ಬಿಜೆಪಿ: ಸಚಿವ ಮಧು ವಾಗ್ದಾಳಿ
ರಾಜ್ಯ ಸರ್ಕಾರಕ್ಕೆ ರಾಮನ ಶಾಪ ತಟ್ಟುತ್ತದೆ ಎಂದು ಆರ್.ಅಶೋಕ್ ಹೇಳಿದ್ದಾರೆ. ಯಾವ ರಾಮನದು? ಅಯೋಧ್ಯೆಯ ರಾಮನಾ? ಪ್ರತಿ ಊರಲ್ಲಿ ರಾಮನಿದ್ದಾನೆ. ಅವರೇನು ರಾಮನನ್ನು ಅಡವಿಟ್ಟು ಕೊಂಡಿದ್ದಾರಾ? ರಾಷ್ಟ್ರಧ್ವಜಕ್ಕೆ ಗೌರವ ಕೊಡುವುದು ನಮ್ಮ ಕರ್ತವ್ಯ. ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ. ನನ್ನ ಪ್ರಕಾರ ಆರ್‌.ಅಶೋಕ್ ಅವರು ಹಿಂದು ವಿರೋಧಿ. ರಾಮನನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ರಾಮನನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಇಷ್ಟು ದಿನ ರಾಮ ಮತ್ತು ಅಯೋಧ್ಯೆಯ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಸಿದ್ಧಾಂತ, ನಂಬಿಕೆಗಳ ಪುನರ್ ನಿಷ್ಕರ್ಷೆ ಅಗತ್ಯ: ಗೋಪಾಲ್ ಯಡಗೆರೆ
ಮಲೆನಾಡಿನ ಯುವಸಮೂಹಕ್ಕೆ ಸಮಾಜವಾದ ಎಂಬ ಪದ ಕೇವಲ ಕೇಳಿದ ಶಬ್ದಪುಂಜವಾಗಿ ಮಾತ್ರ ಉಳಿದಿದೆ. ಭೂಮಿ ಕೇಂದ್ರಿತವಾಗಿ 60ರಿಂದ 70 ದಶಕದ ಕಾಲಘಟ್ಟದಲ್ಲಿ ನಡೆದ ಹೋರಾಟದಿಂದ ಸಮಾಜವಾದದ ಅರ್ಥ ಅಲ್ಲಿಗೇ ಸೀಮಿತವಾಗಿದೆ. ಆದರೆ, ಬದಲಾದ ಸಂದರ್ಭದಲ್ಲಿ ಅವಕಾಶ ಮತ್ತು ಸಂಪತ್ತಿನ ಹಂಚಿಕೆಯ ಸಮಾಜವಾದ ಹೊರಹೊಮ್ಮಿದೆ. ಸಮಾಜವಾದ ಸೇರಿದಂತೆ ಯಾವುದೇ ಸಿದ್ಧಾಂತ ಅಥವಾ ನಂಬಿಕೆ ಆಯಾ ಕಾಲಘಟ್ಟದಲ್ಲಿ ಪುನರ್ ನಿಷ್ಕರ್ಷೆಗೆ ಒಳಪಡಬೇಕಾದ ಅಗತ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸರ್ಕಾರಿ ಯೋಜನೆ ಜವಾಬ್ದಾರಿಯಿಂದ ಬಳಸಿದಾಗ ಸಾರ್ಥಕ: ಸಚಿವ ಮಧು
ಜನರು ಕಟ್ಟುವ ಕಂದಾಯದ ಹಣದಿಂದಲೇ ನಿರ್ಮಾಣವಾಗಿರುವ ಸ್ಮಾರ್ಟ್‍ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲೆ ಹಾಗೂ ಸಾರ್ವಜನಿಕರ ಮೇಲಿದೆ. ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಪರಮೇಶ್ವರ ದೂಗೂರು ಮೇಲಿನ ಸುಳ್ಳು ಪ್ರಕರಣ ಹಿಂಪಡೆಯಬೇಕು
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪರಮೇಶ್ವರ ದೂಗೂರು ಅವರ ಮೇಲೆ ದಾಖಲಿಸಿರುವ ಐದು ಸುಳ್ಳು ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಕಳೆದೆರಡು ದಶಕಗಳಿಂದ ಪರಮೇಶ್ವರ ದೂಗೂರು ದಲಿತರು, ಹಿಂದುಳಿದವರು ಮತ್ತು ನೊಂದವರಿಗೆ ನ್ಯಾಯ ದೊರಕಿಸಲು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ದೂಗೂರು ಅವರ ಮೇಲೆ ಹಗೆತನ ಸಾಧಿಸಲು ಬೇರೆ ಬೇರೆ ರೀತಿಯ ಪಿತೂರಿ ನಡೆಯುತ್ತಿದೆ ಆರೋಪಿಸಿ, ಎಂದು ಸೋಮವಾರ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಕೆರಗೋಡಲ್ಲಿ ಹನುಮಧ್ವಜ ಇಂದು ಸಂಜೆಯೊಳಗೇ ಹಾರಿಸಿ: ಬಿಜೆಪಿ
ಮಂಡ್ಯದ ಕೆರೆಗೋಡು ಗ್ರಾಮದ ರಾಮ ದೇವಸ್ಥಾನದ ಮುಂಭಾಗದಲ್ಲಿ ಗ್ರಾಮಸ್ಥರು ಕಟ್ಟಿದ ಹನುಮಧ್ವಜವನ್ನು ಕೂಡಲೇ ಅದೇ ಜಾಗದಲ್ಲಿ ಹಾರಿಸಬೇಕು. ಇಂದು ಸಂಜೆಯೊಳಗೆ ಹನುಮ ಧ್ವಜವನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲೇ ಮತ್ತೆ ಮರು ಸ್ಥಾಪಿಸದಿದ್ದರೆ ರಾಜ್ಯಾದ್ಯಂತ ಬಿಜೆಪಿ ಉಗ್ರ ಹೋರಾಟ ಕೈಗೊಳ್ಳಲಿದೆ ಎಂದು ಸೋಮವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪ್ರವಾಸಿ ಮಂದಿರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಕುದುರೆಗಣಿಯಲ್ಲಿ ಭರ್ಜರಿ ಹೋರಿಹಬ್ಬ
ಸೊರಬ ತಾಲೂಕಿನ ಕುದುರೆಗಣಿಯಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮಾಭಿವೃದ್ಧಿ ಸಮಿತಿ ನೇತೃತ್ವದಲ್ಲಿ ನಡೆದ ಹೋರಿಹಬ್ಬದಲ್ಲಿ ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ 100ಕ್ಕೂ ಅಧಿಕ ಹೋರಿಗಳು ಪಾಲ್ಗೊಂಡು, ಮಿಂಚಿನ ಓಟದಿಂದ ನೋಡುಗರ ಮೈನವಿರೇಳಿಸಿ, ರಂಜಿಸಿದವು
ಗೋ ಉತ್ಪನ್ನ ಖರೀದಿಸುವ ಮನೋಭಾವ ಬೆಳೆಯಬೇಕು
ಗೋವಿನ ಉತ್ಪನ್ನಗಳನ್ನು ಪರಿಚಯಿಸುವ ಕೆಲಸದ ಜೊತೆಗೆ ಜನರು ಗೋ ಉತ್ಪನ್ನಗಳ ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಲೆನಾಡು ಗಿಡ ತಳಿ ಸಂವರ್ಧನೆ ಮತ್ತು ಸಂರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳಬೇಕು. ಮಠಗಳು ಗೋವು ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿವೆ. ರಾಮಚಂದ್ರಪುರ ಮಠದ ಶ್ರೀಗಳು ಮಲೆನಾಡುಗಿಡ್ಡ ತಳಿ ಸಂರಕ್ಷಣೆಗೆ ವಿಶೇಷ ಒತ್ತು ನೀಡಿದ್ದರು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved