• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಲಲ್ಲಾ ಪ್ರತಿಷ್ಠಾಪನೆ: ಶಿರಾಳಕೊಪ್ಪದಲ್ಲಿ ಪೂಜೆ, ಭಜನೆ
ಅಯೋಧ್ಯೆಯಲ್ಲಿ ರಾಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರತಿಷ್ಠಾಪನೆ ನೆರವೇರುತಿದ್ದಂತೆಯೇ ಭಕ್ತರು ಶಿರಾಳಕೊಪ್ಪ ಪಟ್ಟಣದ ರಾಮದೇವರ ದೇವಸ್ಥಾನದಲ್ಲಿ ವಿವಿಧ ಪೂಜೆ, ಪಟ್ಟಣದ ವಿವಿಧ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಂತೆ ಮೈದಾನದ ರಾಮದೇವರ ಬೀದಿಯ ರಾಮಂದಿರದಲ್ಲಿ ವಿಶೇಷ ಅಲಂಕಾರದಿಂದ ಪೂಜೆ ನಡೆಸಲಾಯಿತು. ಬೆಳಗ್ಗೆ ಹೊಂಡದ ಆಂಜನೇಯಸ್ವಾಮಿ ದೇವಾಲಯ ಬಳಿ ಭಾರಿ ಸಂಖ್ಯೆಯಲ್ಲಿ ರಾಮಭಕ್ತರು ಪಾಲ್ಗೊಂಡಿದ್ದರು. ನೂರಾರು ಮಂದಿ ಕೇಸರಿ ಬಣ್ಣದ ಸೀರಿ, ಶಾಲು ಹೊದ್ದು ಕುಂಭ, ಆರತಿ ತಟ್ಟೆಯೊಂದಿಗೆ ರಾಮದೇವರ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಬುದ್ಧಿ ಸರಿಯಾಗಿದ್ದಾಗ ಆಯುಧ ಸಮರ್ಪಕ ಬಳಕೆ ಸಾಧ್ಯ: ಎಸ್‌ಪಿ
ಬಂದೂಕಿನಂತಹ ಆಯುಧವನ್ನು ತೀರಾ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಸಬೇಕು. ಯಾವುದೇ ಆಯುಧಗಳಿಗೆ ಬುದ್ಧಿ ಇರುವುದಿಲ್ಲ. ಅದು ಯಾರ ಕೈಯಲ್ಲಿ ಇರುತ್ತದೆಯೋ ಅವರ ಬುದ್ಧಿ ಸರಿಯಾಗಿದ್ದಾಗ ಸಮರ್ಪಕ ಕೆಲಸಕ್ಕೆ ಆ ಆಯುಧ ಬಳಕೆಯಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಸಾಗರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದ ಹಾವಾಡಿಗರ ವಿರುದ್ಧ ಕ್ರಮ ಜರುಗಿಸಿ
ತಾಳಗುಪ್ಪ ಹೋಬಳಿಯ ಸಿರಿವಂತೆ ಗ್ರಾಮದ ಸರ್ವೆ ನಂ.74/4ರಲ್ಲಿ ಇರುವ ಜಮೀನಿನ ಮಾಲೀಕ ಬಸವರಾಜ್ ಗೌಡರ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿರುವ ಹಾವಾಡಿಗರ ಕೇರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸದಸ್ಯರು ಸಾಗರ ಪಟ್ಟಣದ ಪೊಲೀಸ್ ಉಪ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮಹಿಳೆಯರಲ್ಲಿ ಅಕ್ಷರಬೀಜ ಬಿತ್ತಿದ ಸಾಧಕಿ ಸಾವಿತ್ರಿಬಾಯಿ ಫುಲೆ
ಸಮಾಜದಲ್ಲಿ ಎದುರಾದ ಅನೇಕ ಕಷ್ಟ, ಅವಮಾನಗಳನ್ನು ಸಹಿಸಿಕೊಂಡು ಜೀವನವಿಡೀ ಹೋರಾಟ ನಡೆಸಿದ ಸಾವಿತ್ರಿಬಾಯಿ ಫುಲೆ ಅವರು ದಲಿತರು ಮತ್ತು ಮಹಿಳೆಯರ ಹೃದಯದಲ್ಲಿ ಅಕ್ಷರಬೀಜ ಬಿತ್ತಿದ ಶಿಕ್ಷಣ ಸಾಧಕಿ. ಸಾವಿರಾರು ವರ್ಷಗಳಿಂದ ಅಕ್ಷರಲೋಕದಿಂದ ವಂಚಿತರಾದ ದಲಿತರು, ಮಹಿಳೆಯರಿಗೆ ಸ್ವತಃ ಶಿಕ್ಷಕಿಯಾಗಿ ಅಕ್ಷರಮಾಲೆ ತೊಡಿಸಿದವರು ಫುಲೆ ಎಂದು ಸಮಾಜ ಚಿಂತಕ ರಾಜಪ್ಪ ಮಾಸ್ತರ್ ಸೊರಬ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ವಚನ ಸಾಹಿತ್ಯಕ್ಕೆ ಅಂಬಿಗರ ಚೌಡಯ್ಯ ಕೊಡುಗೆ ಅಪಾರ
ಅಂಬಿಗರ ಚೌಡಯ್ಯ ಕಾಯಕದ ಜೊತೆ ಸಾಮಾಜಿಕ ಬದಲಾವಣೆಯ ಹರಿಕಾರರಾಗಿ ಗುರುತಿಸಿಕೊಂಡಿದ್ದರು. 12ನೇ ಶತಮಾನದಲ್ಲಿ ವಚನಗಳ ಮೂಲಕ ನಡೆದ ಸಾಮಾಜಿಕ ಕ್ರಾಂತಿ ಅವಿಸ್ಮರಣೀಯವಾಗಿದೆ. ಆ ಕಾಲಘಟ್ಟದಲ್ಲಿ ವಚನ ಸಾಹಿತ್ಯಕ್ಕೆ ಅಂಬಿಗರ ಚೌಡಯ್ಯ ನೀಡಿದ ಕೊಡುಗೆ ಅನನ್ಯವಾದುದು ಎಂದು ತಹಸೀಲ್ದಾರ್ ಚಂದ್ರಶೇಖರ ನಾಯ್ಕ್ ಸಾಗರದಲ್ಲಿ ಹೇಳಿದ್ದಾರೆ.
ಇಂದು ಮಧ್ಯಾಹ್ನವರೆಗೆ ನನ್ನುಸಿರಿದ್ದರೆ ಬದುಕು ಸಾರ್ಥಕ..
ನನ್ನ ಜೀವನದ ಅತಿ ಸಂತಸದ ಜ.22ರ ಸೋಮವಾರದ ಈ ದಿನವನ್ನು ನಾನು ನೋಡುತ್ತೇನೆ ಎನ್ನುವ ಭರವಸೆ ಖಂಡಿತ ನನಗೆ ಇರಲಿಲ್ಲ, ನನಗೆ ಈ ದಿನದ ಸಂಭ್ರಮವನ್ನು ಖುಷಿಯನ್ನು ಸಂತೋಷವನ್ನು ಆನಂದವನ್ನು ವರ್ಣಿಸಲು ಶಬ್ದಗಳು ಸಿಗುತ್ತಿಲ್ಲ. ರಾಮಮಂದಿರ ಹೋರಾಟದ ಬಹುತೇಕ ಎಲ್ಲ ಹಂತದಲ್ಲೂ ತೊಡಗಿಸಿಕೊಂಡಿದ್ದೆ. 500 ವರ್ಷಗಳ ಹೋರಾಟ, ಲಕ್ಷಾಂತರ ಕಾರ್ಯಕರ್ತರ ತ್ಯಾಗ ಶ್ರಮ, ಸಾವಿರಾರು ಕಾರ್ಯಕರ್ತರ ಬಲಿದಾನದ ಫಲವನ್ನು ನಾನು ಬದುಕಿರುವಾಗಲೇ ನೋಡುತ್ತಿದ್ದೇನೆ ಎಂಬುದೇ ಲಕ್ಷಾಂತರ ರಾಮಭಕ್ತರಂತೆ ನನಗೂ ಅವಿಸ್ಮರಣೀಯ ವಿಚಾರ. ಸೋಮವಾರ ಮಧ್ಯಾಹ್ನದವರೆಗೆ ನನ್ನುಸಿರಿದ್ದರೆ ನನ್ನ ಬದುಕು ಸಾರ್ಥಕ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ರಾಮಮಂದಿರ ಹೋರಾಟ ಕುರಿತ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಭಕ್ತಿ, ನಿಷ್ಠೆಯಿಂದ ವೃತ್ತಿಗೆ ಘನತೆ ತಂದ ಅಂಬಿಗರ ಚೌಡಯ್ಯ
ಭಕ್ತಿ ಮತ್ತು ನಿಷ್ಠೆಯ ಕಾಯಕದ ಮೂಲಕ ನಿಜಶರಣ ಅಂಬಿಗರ ಚೌಡಯ್ಯ ವೃತ್ತಿಗೆ ಘನತೆ ತಂದುಕೊಟ್ಟಿದ್ದಾರೆ. 12ನೇ ಶತಮಾನದಲ್ಲಿ ಸಮಾಜದಲ್ಲಿ ಅಸಮಾನತೆ, ಶೋಷಣೆ, ಮೇಲುಕೀಳು, ಕಂದಾಚಾರ, ಮೂಢನಂಬಿಕೆ ಉತ್ತುಂಗದ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಬಸವೇಶ್ವರರು ಜಾತಿ ಅಸಮಾನತೆ ಹೋಗಲಾಡಿಸಿ ಸಮಸಮಾಜ ನಿರ್ಮಾಣಕ್ಕಾಗಿ ಬದುಕನ್ನು ಮುಡಿಪಾಗಿಟ್ಟು ಶ್ರಮಿಸಿದ್ದರು. ಅವರೊಂದಿಗೆ ಸಮಸಮಾಜಕ್ಕಾಗಿ ಶ್ರಮಿಸಿದ ಶರಣರಲ್ಲಿ ಅಂಬಿಗರ ಚೌಡಯ್ಯ ಪ್ರಮುಖರಾಗಿದ್ದರು ಎಂದು ಶಿಕಾರಿಪುರದಲ್ಲಿ ಉಪನ್ಯಾಸಕ ಕೆ.ಎಚ್ ಪುಟ್ಟಪ್ಪ ಹೇಳಿದ್ದಾರೆ.
ಜಿಲ್ಲೆಯಲ್ಲಿ ಶ್ರೀರಾಮಚಂದ್ರ ಭಕ್ತರಲ್ಲಿ ಹೆಚ್ಚಿದ ಸಂಭ್ರಮ
ಅಯೋಧ್ಯೆಯಲ್ಲಿ ಸೋಮವಾರ ರಾಮಲಲ್ಲಾ ಪ್ರತಿಷ್ಠಾಪನೆ ಹಾಗೂ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಪ್ರತಿ ಹಳ್ಳಿಯೂ ಸಂಭ್ರಮ, ಸಡಗರ ಮನೆಮಾಡಿದೆ. ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಆಂಜನೇಯ ದೇವಸ್ಥಾನ ಸೇರಿದಂತೆ ನಗರದ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಿದ್ಧಪಡಿಸಲಾಗುತ್ತಿದೆ. ವಿವಿಧ ಸಂಘ-ಸಂಸ್ಥೆಗಳು ರಾಮ ಭಜನೆ ಕಾರ್ಯಕ್ರಮವನ್ನು ಆಯೋಜಿಸಿವೆ. ನಗರದ ಗಲ್ಲಿಗಲ್ಲಿಗಳು ಶ್ರೀರಾಮನ ಫೆಕ್ಸ್‌ಗಳು ರಾರಾಜಿಸುತ್ತಿವೆ. ಶಿವಮೊಗ್ಗದ ಬಹುತೇಕ ಆರ್ಟ್ಸ್‌ಗಳು ಫುಲ್ ರಶ್ ಆಗಿವೆ.‌
ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ನಿಸ್ವಾರ್ಥ ಸೇವೆ ಬಹುಮುಖ್ಯ
30 ಸಾವಿರ ಬಂಡವಾಳದ ಮೂಲಕ 1952 ರಲ್ಲಿ ಆರಂಭವಾದ ಶಿಕಾರಿಪುರದ ಪೌರವಿಹಾರ ಇದೀಗ 250 ಸದಸ್ಯರ ಮೂಲಕ ಕೋಟ್ಯಂತರ ಬೆಲೆಬಾಳುವ ಆಸ್ತಿ ಹೊಂದಿದೆ. ಆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಸಂಸ್ಥೆ ಬೆಳವಣಿಗೆಯಲ್ಲಿ ಇದುವರೆಗಿನ ಆಡಳಿತ ಮಂಡಳಿ ಹಾಗೂ ಸದಸ್ಯರ ನಿಸ್ವಾರ್ಥ ಪ್ರಾಮಾಣಿಕ ಸೇವೆ ಬಹುಮುಖ್ಯ ಕಾರಣ. ಸರ್ಕಾರಿ ಸಂಸ್ಥೆಗೆ ಹೋಲಿಸಿದಲ್ಲಿ ಖಾಸಗಿ, ಸಾರ್ವಜನಿಕ ಸಂಸ್ಥೆಗಳು ಬೃಹದಾಕಾರವಾಗಿ ಅಭಿವೃದ್ಧಿ ಹೊಂದಲು ಆಡಳಿತ ಮಂಡಳಿ ಸದಸ್ಯರ ಶ್ರಮ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಬಾರ್‌-ರೆಸ್ಟೋರೆಂಟ್‌ ಶೀಘ್ರ ಸ್ಥಳಾಂತರಿಸಿ, ಕಿರಿಕಿರಿ ತಪ್ಪಿಸಿ
ಸೊರಬ ತಾಲೂಕಿನ ಮಾವಲಿ ಗ್ರಾಮದಲ್ಲಿ ಶಾಲೆಗೆ ಹಾದುಹೋಗುವ ದಾರಿಯಲ್ಲಿ ಬಾರ್‌-ರೆಸ್ಟೋರೆಂಟ್‌ ತೆರೆದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಭಟನೆ ನಡೆಸಿರುವ ಸ್ಥಳೀಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರೆಸ್ಟೋರೆಂಟ್‌ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved