• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೈತನ್ಯ ವಿಶೇಷಮಕ್ಕಳ ಶಿಕ್ಷಣ ಸಂಸ್ಥೆಗೆ ದಶಮಾನೋತ್ಸವ ಸಂಭ್ರಮ
ಜೋಗ ಜಲಪಾತ ಸಮೀಪದ ಮಲೆನಾಡಹಳ್ಳಿ ಬಚ್ಚಗಾರು ಎಂಬ ಹಳ್ಲಿಯಲ್ಲಿಯೇ ಬೆಳೆದ ಶಾಂತಲಾ ಅವರು ಸಾಗರದಲ್ಲಿ ಪದವಿ ಮುಗಿಸಿದವರು. ಬಳಿಕ ಹೆಗ್ಗೋಡು ಸಮೀಪ ಮುಂಗರವಳ್ಳಿ ಎಂಬ ಊರಿನ ಸುರೇಶ್ ಎಂಬವರೊಂದಿಗೆ ವಿವಾಹವಾಗಿ ಮತ್ತೆ ಹಳ್ಳಿಗೇ ಬಂದರು. ಜೀವನದಲ್ಲಿ ಸಮಾಜಕ್ಕಾಗಿ ದುಡಿಯುವ ತುಡಿತ ಒಳಗಿನಿಂದ ಬಂದಿತು. ವಿಕಲಚೇತನ ಮಕ್ಕಳ ಸೇವೆ ಮಾಡುವ ಸಂಕಲ್ಪ ಮಾಡಿದರು. ಚೈತನ್ಯ ಟ್ರಸ್ಟ್‌ ಸ್ಥಾಪಿಸಿ, ಅದರ ಮೂಲಕ ಅದೇ ಹಳ್ಳಿಯಲ್ಲಿ ಪತಿ ಸುರೇಶ್ ಜೊತೆ ಸೇರಿ ಅನೌಪಚಾರಿಕವಾಗಿ ಬುದ್ಧಿಮಾಂದ್ಯ ಮಕ್ಕಳ ಮಕ್ಕಳ ಶಾಲೆ ಆರಂಭಿಸಿದರು. ಶಿರಸಿಯ ಅಜಿತ ಮನೋಚೇತನ ಸಂಸ್ಥೆಗೆ ಭೇಟಿ ನೀಡಿ, ಅವರ ಮಾರ್ಗದರ್ಶನ ಪಡೆದು, ಸರ್ಕಾರದಿಂದ ಮಾನ್ಯತೆ ಸಹ ಪಡೆದರು. ಆದರೆ ಅನುದಾನ ಸಿಗಲಿಲ್ಲ. ದಾನಿಗಳ ನೆರವು ಪಡೆದು ಪೂರ್ಣ ಪ್ರಮಾಣದ ಬುದ್ಧಿಮಾಂದ್ಯ ಮಕ್ಕಳ ಗ್ರಾಮೀಣ ಶಾಲೆ ಆರಂಭಿಸಿದರು.
ಜಲಜೀವನ್‌ ಯೋಜನೆ ಹಿನ್ನಡೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ
ತಾಲೂಕಿನ ನೊಣಬೂರು ಹಾದಿಗಲ್ಲು ಮತ್ತು ಕೋಣಂದೂರು ಗ್ರಾಪಂಗಳ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಪ್ರದೇಶದಲ್ಲಿ ಇರುವ ಕೊಳವೆ ಬಾವಿಗಳ ನೀರಿನಲ್ಲಿ ಫ್ಲೋರೈಡ್ ಅಂಶ ಕಂಡು ಬಂದಿರುವುದಾಗಿ ಸಚಿವರ ಗಮನ ಸೆಳೆದ ಶಾಸಕ ಆರಗ ಜ್ಞಾನೇಂದ್ರ, ಈ ಪ್ರದೇಶದ ತೆರೆದ ಬಾವಿಗಳಲ್ಲೂ ಫ್ಲೋರೈಡ್ ಅಂಶ ಇರುವುದು ಆತಂಕಕಾರಿಯಾಗಿದೆ ಎಂದರು. ಈ ಕುರಿತು ಸಚಿವರು ಹಾವೇರಿ ಜಿಲ್ಲೆಯಲ್ಲಿ ಫ್ಲೋರೈಡ್‌ ಅಂಶದ ಬಗ್ಗೆ ಸಂಶೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹೊಸನಗರ ತಾಲೂಕಿನ ಕೆಲವೆಡೆ ಕೂಡ ಈ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಅಗತ್ಯವಾಗಿ ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಸೂಚಿಸಿ ಸಂಶೋಧನೆ ಮಾಡಿಸುವುದಾಗಿಯೂ ತಿಳಿಸಿ, ಎಲೆಚುಕ್ಕಿರೋಗದ ನಿಯಂತ್ರಣದ ಬಗ್ಗೆ ಸಂಬಂಧಿಸಿದ ವಿಜ್ಞಾನಿಗಳ ಜೊತೆ ಚರ್ಚಿಸಿರುವುದಾಗಿಯೂ ತಿಳಿಸಿದರು.
ವಕೀಲರ ಮೇಲೆ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಮನವಿ ಸ್ವೀಕರಿಸಲು ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳೇ ಬರಬೇಕು ಎಂದು ಪಟ್ಟುಹಿಡಿದರು. ಸ್ಥಳಕ್ಕೆ ತಹಸೀಲ್ದಾರ್, ಡಿವೈಎಸ್‌ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಂದರೂ ಮನವಿ ಕೊಡಲು ನಿರಾಕರಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಬರಬೇಕು ಎಂದು ಆಗ್ರಹಿಸಿದರು. ಈ ಮಧ್ಯೆ ವಕೀಲರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಮತ್ತು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ವಕೀಲರು ಪ್ರತಿಭಟನೆ ಹಿಂಪಡೆದರು.
ಬರ ಹಿನ್ನೆಲೆ ಕುಡಿವ ನೀರಿಗೆ ಹೆಚ್ಚಿನ ಬೋರ್‌ವೆಲ್‌ಗಳ ಕೊರೆಯಿರಿ
ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ, ತೆರೆದ ಬಾವಿ, ಕಾಲುಸಂಕ ಹಾಗೂ ಗೋಕಟ್ಟೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆಬಾವಿಗಳಿಗೆ ಬಿಲ್ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ. ಈ ಕಾರಣಕ್ಕೆ ಹೊಸ ಕೊಳವೆಬಾವಿ ಕೊರೆಸಲು ಸಾಧ್ಯವಾಗಿಲ್ಲ. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರದ ಗಮನಕ್ಕೆ ವಿಷಯ ತಂದು ಮನವಿ ಮಾಡಿದರು. ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಮಾತನಾಡಿದರು. ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರಕುಮಾರ್ ಮತ್ತಿತರರು ಇದ್ದರು.
ಶಿಶುಪಾಲನಾ ಕೇಂದ್ರ ಸ್ಥಗಿತಗೊಳಿಸುವ ಕಾಂಗ್ರೆಸ್‌ ಸರ್ಕಾರ ಕ್ರಮ ಸರಿಯಲ್ಲ
ಅಧಿಕಾರಿಗಳು ಯಾವ ಕಾರ್ಡ್‌ಗಳು ಸರಿ ಇವೆ ಎನ್ನುತ್ತಿದ್ದಾರೆ. ಅಧಿಕಾರಿಗಳೇನು ಅನುಕಂಪ ಇದೆ. ಆದರೆ ಮಂತ್ರಿಗಳಿಗೆ ಏಕೆ ಇಲ್ಲ. ಒಂದು ವೇಳೆ ಬೋಗಸ್‌ ಕಾರ್ಡ್‌ ಇದ್ದರೆ, ಭ್ರಷ್ಟಚಾರ ನಡೆದಿದ್ದರೆ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಯಾರೋ ಮಾಡಿದ ತಪ್ಪಿಗೆ ಮಕ್ಕಳಿಗೆ ಯಾಕೆ ಶಿಕ್ಷೆ ಕೊಡಬೇಕು. ಅವರಗೆ ಒಂದು ತುತ್ತು ಅನ್ನ ಹಾಕಲು ಈ ಸರ್ಕಾರಕ್ಕೆ ಆಗಲ್ವ ಎಂದು ಪ್ರಶ್ನಿಸಿದರು.
ಸಮಾಜದಲ್ಲಿ ಮಾನವತೆ ಬಿತ್ತಿದ ವಿಶ್ವಮಾನವ ಕನಕದಾಸ: ಡಾ. ಎಂ.ಎಂ. ಮಂಜುನಾಥ
ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ. ಚನ್ನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾಜಿಕ ವ್ಯವಸ್ಥೆ ರೋಗಗ್ರಸ್ಥವಾಗಿದ್ದ ಹೊತ್ತಿನಲ್ಲಿ ದಿವ್ಯೌಷಧವಾಗಿ ಬಂದವರು ಕನಕದಾಸರು. ಕನ್ನಡದಲ್ಲಿ ಮಹಾಕಾವ್ಯಗಳನ್ನು ಬರೆದರು. ಇಡೀ ಸಾಹಿತ್ಯ ಚರಿತ್ರೆಯಲ್ಲಿ ಮೊದಲ ಬಾರಿಗೆ ಧಾನ್ಯಗಳನ್ನು ಕಾವ್ಯದ ನಾಯಕರಾಗಿಸಿಕೊಂಡರು. ಇದರ ಮೂಲಕ ವರ್ಗ ಸಂಘರ್ಷದ ಕಥನ ತಂದು ಮೇಲು ಕೀಳಿನ ಬೇರುಗಳನ್ನು ಕಿತ್ತರು. ಅವರ ಕಾವ್ಯ, ಕೀರ್ತನೆ, ಉಗಾಬೋಗಾದಿಗಳು, ಮುಂಡಿಗೆಗಳ ಮೂಲಕ ಶ್ರೀಸಾಮಾನ್ಯರಲ್ಲಿ ಅರಿವನ್ನು ಮೂಡಿಸಿ ಸಮ ಸಮಾಜವನ್ನು ಕಟ್ಟುವಲ್ಲಿ ಯಶಸ್ವಿಯಾದವರು ಎಂದರು.
ಯುವಜನರಿಗೆ ದಾರ್ಶನಿಕರ ಆದರ್ಶ ಪರಿಚಯ ಜಯಂತಿಗಳ ಉದ್ದೇಶ
ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಮತ್ತು ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಕನಕದಾಸ ಕುರಿತು ಉಪನ್ಯಾಸ ನೀಡಿದರು. ನಗರಸಭೆ ಸದಸ್ಯರಾದ ಕಾಂತರಾಜು, ಮಂಜುಳಾ ಸುಬ್ಬಣ್ಣ, ಶಶಿಕಲಾ ನಾರಾಯಣಪ್ಪ, ಅನಿತಾ ಮಲ್ಲೇಶ್, ಆರ್. ಶ್ರೇಯಸ್, ಚನ್ನಪ್ಪ, ಮಣಿ ಎಎನ್‌ಎಸ್, ಜಾರ್ಜ್, ಬಸವರಾಜ ಬಿ. ಆನೇಕೊಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ಸಮುದಾಯಗಳ ಪ್ರಮುಖರಾದ ಕೆ. ಚಂದ್ರಶೇಖರ್, ಸೆಲ್ವರಾಜ್, ಜುಂಜ್ಯಾನಾಯ್ಕ, ಸಿ.ಜಯಪ್ಪ, ವೈ.ರೇಣುಕಮ್ಮ, ಗಿರೀಶ್, ಎಚ್.ರವಿಕುಮಾರ್, ಅಭಿಲಾಷ್, ಕುಮಾರ್, ಶ್ರೀನಿವಾಸ್, ಬಿ.ಕೆ. ಜಗನ್ನಾಥ್, ಬಿ.ಕೆ. ಶಿವಕುಮಾರ್, ಸುಕನ್ಯ, ಶೋಭ ರವಿಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಗ್ರಾಮೀಣ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರತಿಭಾ ಕಾರಂಜಿ ಪೂರಕ
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಕುಸಿಯುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧೆ ಎಂದು ಭಾವಿಸದೇ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.
ತವರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅದ್ಧೂರಿ ಸ್ವಾಗತ
ಈಶ್ವರಪ್ಪ- ಸಂಘ ಪ್ರಮುಖರ ಮನೆಗೆ ಭೇಟಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ತವರು ಜಿಲ್ಲೆಗೆ ಆಗಮಿಸುತ್ತಿದ್ದಂತೆ ಮತ್ತೂರು ಗ್ರಾಮಕ್ಕೆ ತೆರಳಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹಕ ಪಟ್ಟಾಭಿರಾಮ್ ಹಾಗೂ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು. ಬಳಿಕ ಶಿವಮೊಗ್ಗ ನಗರದ ಗುಂಡಪ್ಪ ಶೆಡ್‌ನಲ್ಲಿರುವ ಮಾಜಿ ಸಚಿವ ಕೆ.ಎಸ್.ಈ. ನಿವಾಸಕ್ಕೆ ಭೇಟಿ ನೀಡಿ, ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದುಕೊಂಡರು. ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ವೇಳೆ ಈಶ್ವರಪ್ಪ ಅವರಿಗೆ ಶಾಲು ಹೊದಿಸಿ, ಬಿ.ವೈ.ವಿಜಯೇಂದ್ರ ಅವರು ಸನ್ಮಾನ ಮಾಡಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮಮ್ಮ ಶುಭ ಕೋರಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಜಯಘೋಷ ಕೂಗಿದರು.
ಇಎಸ್‌ಐ ಆಸ್ಪತ್ರೆಯಿಂದ ಲಕ್ಷಾಂತರ ಕಾರ್ಮಿಕರಿಗೆ ಆರೋಗ್ಯಭಾಗ್ಯ
ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸುಂದರಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘ ಸಂಸ್ಥೆಗಳು ಕೇವಲ ಸರ್ಕಾರದ ಸೌಲಭ್ಯಕ್ಕೆ ಮಾತ್ರ ಸೀಮಿತವಾಗದೇ ಸಮಾಜಮುಖಿ ಕಾರ್ಯದ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಈ ದಿಸೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಈಗಾಗಲೇ ಸಸಿ ನೆಡುವ ಕಾರ್ಯಕ್ರಮ, ವ್ಹೀಲ್ ಚೇರ್ ವಿತರಣೆ, ಉಚಿತ ದಂತಪಂಕ್ತಿ ಮತ್ತಿತರ ಹಲವು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 484
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved