ಶಿಳ್ಳೇಕ್ಯಾತ ಸಮುದಾಯದ ಅಭಿವೃದ್ಧಿಗೆ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಶಿವಮೊಗ್ಗ: ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ ಸೌಲಭ್ಯವನ್ನು ಒದಗಿಸಿಕೊಟ್ಟು, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.