ಶಿವಮೊಗ್ಗದಲ್ಲಿ ಸ್ಟಾರ್ ಏರ್‌ಲೈನ್ಸ್‌ಗೆ ಸ್ವಾಗತ ಕೋರಿದ ಸಂಸದ ರಾಘವೇಂದ್ರಈಗಾಗಲೇ ಶಿವಮೊಗ್ಗ-ಬೆಂಗಳೂರು ನಡುವೆ ಇಂಡಿಗೋ ವಿಮಾನ ಸಂಚರಿಸುತ್ತಿದೆ. ಇದೀಗ ಸ್ಟಾರ್ ಏರ್ ಲೈನ್ಸ್ ವಿಮಾನಗಳು ಶಿವಮೊಗ್ಗದಿಂದ ಗೋವಾ, ಹೈದರಾಬಾದ್, ತಿರುಪತಿಗೆ ಪ್ರತಿ ಮಂಗಳವಾರ, ಬುಧವಾರ, ಗುರುವಾರ ಮತ್ತು ಶನಿವಾರ ಹಾರಾಟ ನಡೆಸಲಿವೆ ಎಂದರು,ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.