ಭ್ರಷ್ಟಾಚಾರದಲ್ಲಿ ದಾಖಲೆ ಬರೆಯುತ್ತಿರುವ ಸರ್ಕಾರ: ಬಿ.ವೈ.ರಾಘವೇಂದ್ರ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದ ಕುರಿತಂತೆ ಜನಸಾಮಾನ್ಯರು, ಮಾಧ್ಯಮಗಳು ಹೇಳುತ್ತಿರುವುದನ್ನು ಕೇಳಿಸಿ ಕೊಂಡಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟಾಚಾರದ ಕುರಿತು ದಾಖಲೆಗಳನ್ನು ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಲೇವಡಿ ಮಾಡಿದ್ದಾರೆ.