ಸಚಿವ ಮಧುಗೆ ಅಧಿಕಾರದ ಪಿತ್ತ ನೆತ್ತಿಗೇರಿದೆಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ. ಆಶ್ರಯ ವಸತಿ ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆಗಳನ್ನು ವಿತರಿಸಲು ಮಂಗಳವಾರ ವಸತಿ ಸಚಿವ ಜಮೀರ್ ಅಹಮ್ಮದ್ ಬರಬೇಕಾಗಿತ್ತು. ಆದರೆ, ಸಚಿವ ಮಧು ಬಂಗಾರಪ್ಪ ಮಂತ್ರಿಗಳು ಬರುವುದನ್ನು ತಡೆದಿದ್ದಾರೆ. ಈ ದುಷ್ಟಬುದ್ಧಿ ಯಾಕೆ ? ಇದು ಯಾವ ಪುರುಷಾರ್ಥಕ್ಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.