ಆಶ್ರಯ ಮನೆಗಳ ಮೂಲಭೂತ ಸೌಕರ್ಯಕ್ಕೆ ಕ್ರಮಶಿವಮೊಗ್ಗ: ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.