ಶಿವಮೊಗ್ಗದಲ್ಲಿ ಆಕಾಶವಾಣಿ ಧ್ವನಿಮುದ್ರಣ ಘಟಕ ಆರಂಭಕ್ಕೆ ಕ್ರಮಶಿವಮೊಗ್ಗ: ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ ಒದಗಿಸಿಕೊಟ್ಟು, ಅತ್ಯಲ್ಪ ಅವಧಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಹೇಳಿದರು.