ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಹೋರಾಟ ೩ನೇ ವರ್ಷಕ್ಕೆಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕು, ಅಗತ್ಯ ಬಂಡವಾಳ ತೊಡಗಿಸಿ ಪುನಶ್ಚೇತನಗೊಳಿಸಬೇಕು ಹಾಗೂ ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಕೆಲಸ ಕಲ್ಪಿಸಿಕೊಡಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಭಾನುವಾರ ೨ ವರ್ಷ ಪೂರೈಸಿದೆ.