ಸುಗಮ ಸಂಗೀತ ಸ್ನೇಹ, ಪ್ರೀತಿಗೆ ಅನ್ವರ್ಥ: ರೋಟರಿಯ ಡಾ.ಎಚ್.ಇ. ಜ್ಞಾನೇಶ್ಬದುಕಿಗೆ ಔಷಧ ನೀಡುವ ಗುಣ ಸಂಗೀತಕ್ಕೆ ಇದೆ. ಸ್ನೇಹ, ಪ್ರೀತಿಯ ಅನ್ವರ್ಥನಾಮ ಕೂಡ ಸುಗಮ ಸಂಗೀತ. ಹಾಗಾಗಿ ಸುಗಮ ಸಂಗೀತವನ್ನು ಆಲಿಸದ, ಆಸ್ವಾದಿಸದ ಮನಸ್ಸು ಇದ್ದರೆ ಅದು ಕಲ್ಲು ಹೃದಯವೇ ಸರಿ ಎಂದು ಸಮಾಜ ಸೇವಕ, ರೋಟರಿ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಇ. ಜ್ಞಾನೇಶ್ ಅಭಿಪ್ರಾಯಪಟ್ಟರು. ಸೊರಬದಲ್ಲಿ ಎರಡು ದಿನಗಳ ಸುಗಮ ಸಂಗೀತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.