ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಶಿವಮೊಗ್ಗ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆಯಂತಹ ಅನೇಕ ಕಠಿಣ ಕಾಯ್ದೆಗಳು ಜಾರಿಗೆ ಬಂದಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.