ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ತಪ್ಪು ತಿಳುವಳಿಕೆ ಬೇಡಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ. ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ. ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಗಳಿಗೆ ಮಾತ್ರ ಸೀಮಿತವಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯ ಡಾ.ಚೇತನ್ ಕುಮಾರ್ ನವಿಲೇಹಾಳ್ ಹೇಳಿದರು.