ಮಂಗನ ಕಾಯಿಲೆ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ಈ ನಾಲ್ಕು ತಾಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.