ಕ್ರಮಬದ್ಧವಲ್ಲದ ಆಹಾರದಿಂದ ಜೀವನ ಶೈಲಿ ಹಾಳುಇತ್ತೀಚಿನ ವರ್ಷಗಳಲ್ಲಿ ಅಶಿಸ್ತಿನ ಜೀವನ ಶೈಲಿ ಮತ್ತು ಕ್ರಮಬದ್ಧವಲ್ಲದ ಆಹಾರ ಕ್ರಮದಿಂದಾಗಿ ರಕ್ತದೊತ್ತಡ, ಮಧುಮೇಹ ಹಾಗೂ ಕ್ಯಾನ್ಸರ್ ರೋಗಿಗಳ ಸಂಖ್ಯೆಯೂ ಅಧಿಕವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಮಧ್ಯ ವಯಸ್ಸಿನ ನಂತರ ಸತತ ತಪಾಸಣೆ ಅಗತ್ಯ ಎಂದು ಉಡುಪಿ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಚಂದ್ರಶೇಖರ್ ಹೇಳಿದರು.