ಯುವ ಜನತೆ ವ್ಯಸನಿಗಳಾಗುತ್ತಿರುವುದು ಆತಂಕಕಾರಿಇತ್ತೀಚಿನ ದಿನಗಳಲ್ಲಿ ಯುವ ಜನತೆ ಗಾಂಜಾ ಸೇವನೆ ಸೇರಿದಂತೆ ವಿವಿಧ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಬಗ್ಗೆ ಪೋಷಕರು, ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲದೇ ಸಮಾಜ ಕೂಡಾ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ ಎಂದು ಜಿಲ್ಲಾ ಮಾದಕ ವಸ್ತುಗಳ ನಿಯಂತ್ರಣ ಅಧಿಕಾರಿ ಎಸ್.ವಿ. ವೀರೇಶ್ ಹೇಳಿದರು.