ಪೊಲೀಸರಿಂದ ಶಾಸಕರ ಬೆಂಬಲಿಗರ ಅಕ್ರಮಗಳಿಗೆ ಸಹಕಾರಸಾಗರ ವಿಧಾನಸಭಾ ಕ್ಷೇತ್ರದ ಸಾಗರ ಮತ್ತು ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಕಡಿವಾಣ ಹಾಕಬೇಕಾದ ಪೊಲೀಸರು ಶಾಸಕರ ಬೆಂಬಲಿಗರ ಅಕ್ರಮಗಳಿಗೆ ಸಹಕಾರ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಒಂದು ನ್ಯಾಯ, ಇತರರಿಗೆ ಒಂದು ನ್ಯಾಯ ಇದೆಯೇ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಪ್ರಶ್ನಿಸಿದರು.