ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ಗೆ ನೋಟಿಸ್ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ಅವರ ಪ್ರಾಥಮಿಕ ಸದಸ್ಯತ್ವವನ್ನು ಅಮಾನತ್ತಿನಲ್ಲಿ ಇರಿಸಬಾರದೇಕೆ ಎಂದು ಕಾರಣ ಕೇಳಿ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ನೀಡಿದ್ದ ನೋಟಿಸ್ ವಿರುದ್ಧ ಜಿಲ್ಲೆಯಾದ್ಯಂತ ಸಾಹಿತ್ಯಾಸಕ್ತರು, ಸಾಹಿತಿಗಳು, ಕನ್ನಡಪರ ಮನಸ್ಸುಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ನೋಟಿಸ್ ಅನ್ನು ತಕ್ಷಣ ವಾಪಸ್ಸು ಪಡೆಯವಂತೆ ಆಗ್ರಹಪಡಿಸಿದ್ದಾರೆ.