ಲೋಕಾಯುಕ್ತ ಕಾರ್ಯದ ಬಗ್ಗೆ ಮಾಹಿತಿ ನೀಡಿಜನರಿಗೆ ಮಾಧ್ಯಮಗಳಿಂದ ಮಾಹಿತಿ ದೊರೆತರೆ, ನಾಲ್ಕಾರು ಮಂದಿ ತಮ್ಮ ಬಳಿ ನೋವನ್ನು ಹೇಳಿಕೊಳ್ಳುತ್ತಾರೆ. ಅವರಲ್ಲಿ ಒಬ್ಬರಿಗಾದರೂ ನ್ಯಾಯ ಸಿಕ್ಕರೆ ಲೋಕಾಯುಕ್ತ ಇರುವುದಕ್ಕೂ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯ ಸಭೆ, ಕಾರ್ಯ ಚಟುವಟಿಕೆಗಳ ಕುರಿತು ಮಾಧ್ಯಮಗಳಿಗೆ ಸರಿಯಾಗಿ ಮಾಹಿತಿ ನೀಡಬೇಕು. ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಅನುಸರಿಸಬೇಕಾಗುತ್ತದೆ ಎಂದು ಲೋಕಾಯುಕ್ತ ನಿರೀಕ್ಷಕ ವೀರಬಸಪ್ಪ ಎಲ್. ಕುಸಲಾಪುರ ಎಚ್ಚರಿಸಿದರು.