ಇಂದು ಲೋಕ್ ಅದಾಲತ್ ಕಾರ್ಯಕ್ರಮಶಿವಮೊಗ್ಗ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸಲು ‘ಲೋಕ್ ಅದಾಲತ್’ ಕಾರ್ಯಕ್ರಮವನ್ನು ಮಾ.8 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಪಕ್ಷಗಾರರು ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು.