ಸಾರಾಂಶ
ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ, ದೊರೆ, ನಂಜುಂಡಿ, ನಮ್ಮೂರು ಹುಡ್ಗ ಸೇರಿದಂತೆ ಹಲವು ಚಿತ್ರಗಳ ಚಿತ್ರೀಕರಣ ಇದೇ ನೆಲದಲ್ಲಿ ಆಗಿತ್ತು. ಅಭಿಮಾನಿಗಳ ಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆದಷ್ಟು ಬೇಗ ಗುಣಮುಖರಾಗಿ ಹಿಂದಿರುಗಲಿ ಎಂದು ಸಂಕಲ್ಪಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ .
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅನಾರೋಗ್ಯ ಕಾರಣದಿಂದ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದು, ಮಂಗಳವಾರ ಶಸ್ತ್ರಚಿಕಿತ್ಸೆ ನಡೆದ ಹಿನ್ನೆಲೆ, ಶಿವರಾಜ್ ಕುಮಾರ್ ಅವರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಅವರ ಅಭಿಮಾನಿಗಳು ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಬೆಂ.ಗ್ರಾ ಜಿಲ್ಲಾ ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಡಿ.ಸಿ.ಚೌಡರಾಜ್, ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ, ದೊರೆ, ನಂಜುಂಡಿ, ನಮ್ಮೂರು ಹುಡ್ಗ ಸೇರಿದಂತೆ ಹಲವು ಚಿತ್ರಗಳ ಚಿತ್ರೀಕರಣ ಇದೇ ನೆಲದಲ್ಲಿ ಆಗಿತ್ತು. ಅಭಿಮಾನಿಗಳ ಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆದಷ್ಟು ಬೇಗ ಗುಣಮುಖರಾಗಿ ಹಿಂದಿರುಗಲಿ ಎಂದು ಸಂಕಲ್ಪಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ ಎಂದರು.
ರಾಜ್ಯದ ಹೆಮ್ಮೆಯ ಕೆಎಂಎಫ್ ಸಂಸ್ಥೆಗೆ ರಾಯಭಾರಿಗಳಾಗಿ ಸದಾ ರೈತರ ಬೆನ್ನುಬಾಗಿ ನಿಂತಿರುವ ರಾಜ್ ಕುಮಾರ್ ಕುಟುಂಬಕ್ಕೆ ರಾಜ್ಯದ ಎಲ್ಲಾ ಹಳ್ಳಿ ರೈತರ ಶುಭ ಹಾರೈಕೆ ಸದಾ ಇರುತ್ತದೆ. ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಅಂಗವಾಗಿ ಉಚಿತ ಮೇವು ವಿತರಣೆಗೆ ಬೆಂಬಲವಾಗಿ ಒಂದು ಲೋಡ್ ಮೇವು ನೀಡಿರುವ ರಾಜ್ ಕುಟುಂಬದ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ತಿಳಿಸಿದರು.ಶಿವರಾಜ್ ಕುಮಾರ್ ಅಭಿಮಾನಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.