ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಬುಧವಾರ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಬುಧವಾರ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು. ಪ್ರಾತಃಕಾಲ ಮಹಾರುದ್ರಾಭಿಷೇಕ, ವಿಶೇಷ ಪೂಜೆ ಅಲಂಕಾರಗಳೊಂದಿಗೆ ಪ್ರಾರಂಭವಾದ ಕಾರ್ಯಕ್ರಮಗಳು ಸಂಜೆ ಜಾಗರಣೆ, ಅಖಂಡ ಭಜನೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮುಂದುವರಿದವು. ಬೆಳಗ್ಗಿನಿಂದಲೇ ದೇವಾಲಯಕ್ಕೆ ಅಸಂಖ್ಯಾತ ಭಕ್ತರು ಭೇಟಿ ನೀಡಿ ದರ್ಶನ ಪಡೆದರು. ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.