22ರಿಂದ ಬ್ರಹ್ಮಕುಮಾರೀಸ್‌ ಈಶ್ವರೀಯ ವಿವಿಯಿಂದ ಶಿವರಾತ್ರಿ: ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ

| Published : Feb 21 2025, 11:46 PM IST

22ರಿಂದ ಬ್ರಹ್ಮಕುಮಾರೀಸ್‌ ಈಶ್ವರೀಯ ವಿವಿಯಿಂದ ಶಿವರಾತ್ರಿ: ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26ರ ವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26ರ ವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ.ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರತಿನಿಧಿ ಬಿ‌.ಕೆ. ರಘುರಾಮ್ ಮಾತನಾಡಿ, ಫೆ.22ರಂದು ಸಂಜೆ 5.30ಕ್ಕೆ ದಾದ್ವಶ ಜ್ಯೋರ್ತಿಲಿಂಗಗಳ ದಿವ್ಯದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದರು.ಫೆ.26ರಂದು ಬೆಳಗ್ಗೆ 7 ಗಂಟೆಗೆ ಸಂಸ್ಥೆಯ ಉಡುಪಿ ಶಾಖೆಯಲ್ಲಿ 89ನೇ ತ್ರಿಮೂರ್ತಿ ಶಿವ ಜಯಂತಿ ಪ್ರಯುಕ್ತ ಶಿವಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಅತಿಥಿಯಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ ಭಾಗವಹಿಸಲಿದ್ದಾರೆ.ಫೆ.28ರಂದು ಸಂಜೆ 5.30ಕ್ಕೆ ಅಜ್ಜರಕಾಡು ಹುತಾತ್ಮ ಸ್ಮಾರಕದ ವೇದಿಕೆಯ ಬಳಿಯಲ್ಲಿ 89ನೇ ತ್ರಿಮೂರ್ತಿ ಶಿವ ಜಯಂತಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಡಿಡಿಪಿಐ ಗಣಪತಿ ಕೆ. ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರತಿದಿನ ಸಂಜೆ 6ರಿಂದ 7ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.ಸುದ್ಧಿಗೋಷ್ಠಿಯಲ್ಲಿ ಸಂಸ್ಥೆಯ ಸದಸ್ಯರಾದ ಸುಮಾ, ಭಾಸ್ಕರ್, ಮಾಲಿನಿ, ಚಂದ್ರ ಆಮೀನ್ ಉಪಸ್ಥಿತರಿದ್ದರು.