ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮಸ್ಮರಣೆ

| Published : Nov 28 2024, 12:34 AM IST

ಸಾರಾಂಶ

ಮಹಾವೀರ ವೃತ್ತದ ಬಳಿ ಶ್ರೀ ಮಸವತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರ ೧೦೯ನೇ ಜನ್ಮಸ್ಮರಣೆಯ ಅಂಗವಾಗಿ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದಾಸೋಹಕ್ಕೆ ಚಾಲನೆ ನೀಡಿದರು. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರು ಸಮಾಜದಲ್ಲಿ ಶಾಂತಿ ನೆಲೆಸಲಿ. ಅಭಿವೃದ್ಧಿ ಆಗಲೆಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಮಹಾವೀರ ವೃತ್ತದ ಬಳಿ ಶ್ರೀ ಮಸವತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರ ೧೦೯ನೇ ಜನ್ಮಸ್ಮರಣೆಯ ಅಂಗವಾಗಿ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದಾಸೋಹಕ್ಕೆ ಚಾಲನೆ ನೀಡಿದರು.

ನಂತರ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮೀಜಿಗಳು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಸದಾಚಾರ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಹೊಂದಿರುವ ಶ್ರೀ ಸುತ್ತೂರು ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದ್ದು, ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ನೀಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ದೇಶದಲ್ಲಿ ಶಾಂತಿ ನೆಲೆಸಬೇಕು. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರು ಸಮಾಜದಲ್ಲಿ ಶಾಂತಿ ನೆಲೆಸಲಿ. ಅಭಿವೃದ್ಧಿ ಆಗಲೆಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿದರು. ಕಾಯಕ ಎನ್ನುವ ಸಾಮಾಜಿಕ ಸೇವೆಯನ್ನು ಆರಂಭಿಸಿದರು. ಸುತ್ತೂರು ಮಠದಲ್ಲಿ ಸಮಾಜದ ಅಭಿವೃದ್ಧಿಗಾಗಿ ಸೇವೆಯನ್ನು ಎಲ್ಲಾ ಜನಾಂಗದವರಿಗೂ ನೀಡಿದ್ದಾರೆ. ನಮ್ಮ ಧರ್ಮದ ಏಕತೆ ಮತ್ತು ಸಮಗ್ರತೆ ಮತ್ತು ಸನಾತನ ಧರ್ಮದ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ಸಾಧುಗಳು ಮತ್ತು ಸಂತರು ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರು ಚಿಂತನಶೀಲ ಮತ್ತು ಸಂವೇದನಾಶೀಲರು ಮತ್ತು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಪೋಷಕರಾಗಿದ್ದರು. ಸಮಾಜದಲ್ಲಿನ ಅಸಮಾನತೆ, ಬಡತನ ಮತ್ತು ಅನಕ್ಷರತೆಯ ಸಮಸ್ಯೆಗಳನ್ನು ಹೋಗಲಾಡಿಸಲು, ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ಹೇಳಿದರು.

ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ಮಾಡುವ ಮೂಲಕ ಸಮಾಜವನ್ನು ಸ್ವಾವಲಂಬಿಯನ್ನಾಗಿ ಮಾಡಲು, ಜೆಎಸ್‌ಎಸ್ ಮಹಾವಿದ್ಯಾಪೀಠವು ಸಾಮಾಜಿಕ ಸಮಾನತೆ, ಸಮೃದ್ಧಿ, ಶ್ರೇಷ್ಠತೆ, ಸಬಲೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಅಮೂಲ್ಯವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ಜೆ ಎಸ್ ಎಸ್ ಮಹಾವಿದ್ಯಾಪೀಠದ ಆಶ್ರಯದಲ್ಲಿ, ಅವರು ಅಕ್ಷರ ದಾಸೋಹಕ್ಕಾಗಿ ಶಾಲೆಗಳು ಮತ್ತು ಕಾಲೇಜುಗಳನ್ನು ಪ್ರಾರಂಭಿಸಿದರು. ಅನ್ನ ದಾಸೋಹಕ್ಕಾಗಿ ವಸತಿ ಮತ್ತು ಆರೋಗ್ಯ ದಾಸೋಹಕ್ಕಾಗಿ ಆಸ್ಪತ್ರೆಗಳನ್ನು ಪ್ರಾರಂಭಿಸಿರುವುದಾಗಿ ಹೇಳಿದರು. ಇದೆ ವೇಳೆ ಭಾಗವಹಿಸಿದ್ದ ವಿವಿಧ ಮಠದ ಸ್ವಾಮೀಜಿಗಳು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಯವರ ಸೇವೆಯನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀ ಜವೇನಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಪುಷ್ಪಗಿರಿ ಮಹಾಸಂಸ್ಥಾನ ಮಠದ ಶ್ರೀ ಸೋಮಶೇಖರ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯ ಸಮಿತಿ ಸದಸ್ಯ ಬಿ.ಆರ್. ವಸಂತ ಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎನ್. ಪರಮೇಶ್, ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಗಳು ದೊಡ್ಡಮಠ, ಶ್ರೀ ಕಲ್ಯಾಣ ಸ್ವಾಮೀಜಿಗಳು ಸಿದ್ದರಾಮೇಶ್ವರ ಮಠ ತೇಜೂರು, ಶ್ರೀ ಸದಾಶಿವ ಸ್ವಾಮೀಜಿಗಳು ಕಿರ್ಗೊಡ್ಲು ಮಠ, ಶ್ರೀ ಮಹಾಂತ ಸ್ವಾಮೀಜಿಗಳು ಕಲ್ಮಠ, ಶ್ರೀ ಬಸವರಾಜೇಂದ್ರ ಸ್ವಾಮೀಜಿಗಳು ಕೆಸತ್ತೂರು ಮಠ, ಜಯದೇವಿ ತಾಯಿ ಶ್ರೀ ಗುರುಮಲ್ಲೇಶ್ವರ ಮಠ ಲಾಲನಹಳ್ಳಿ, ಶ್ರೀ ವಿಜಯಕುಮಾರ ಸ್ವಾಮೀಜಿಗಳು ಕಣ್ಣೀರು ಹಳ್ಳ ಮಠ, ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ನುಗ್ಗೆಹಳ್ಳಿ ಮಠ, ಶ್ರೀ ಸಂಗಮೇಶ್ವರ ಸ್ವಾಮೀಜಿಗಳು ಜವೇನಳ್ಳಿ ಮಠ, ಶ್ರೀ ಸೋಮಶೇಖರ ಸ್ವಾಮೀಜಿ ಅವರು ಟೀ ಮಾಯಗೌಡನಹಳ್ಳಿ ಮಠ ಮುಂತಾದ ಪೂಜ್ಯರು ಹಾಜರಿದ್ದರು. ವೀರಶೈವ ಲಿಂಗಾಯಿತ ಮಹಾವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಕಲ್ಲೂರ್, ಜಿಲ್ಲಾಧ್ಯಕ್ಷರಾದ ಪ್ರಸನ್ನ, ಜಿಲ್ಲಾ ಸಮಿತಿಯ ಸದಸ್ಯರಾದ ಧರ್ಮರವರು, ಪ್ರಕಾಶ್ ರವರು, ಪ್ರೇಮ್ ಕುಮಾರ್, ತೇಜು ಮೂರ್ತಿ ಶಿವಕುಮಾರ್, ದೇವರಾಜು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.