ಶೃಂಗೇರಿಯಲ್ಲಿ ಶಿವರಾತ್ರಿ ವಿಶೇಷ ಪೂಜೆ

| Published : Feb 27 2025, 12:31 AM IST

ಸಾರಾಂಶ

ತಾಲೂಕಿನಲ್ಲಿ ಬುಧವಾರ ಸಂಭ್ರಮ ಸಡಗರದ ಮಹಾಶಿವರಾತ್ರಿ ಹಬ್ಬ ನಡೆಯಿತು. ಬೆಳಿಗ್ಗೆಯಿಂದಲೇ ಜನರು ದೇವಾಲಯಗಳಿಗೆ ತೆರಳಿ ಹಣ್ಣು ಕಾಯಿಗಳನ್ನು ಸಮರ್ಪಿಸಿದರು. ತಾಲೂಕಿನ ಎಲ್ಲಾ ದೇವಾಲಯಗಳಲ್ಲಿ ಮಹಾಶಿವರಾತ್ರಿಯ ವಿಶೇಷ ಪೂಜೆ ನೆರವೇರಿತು.

ಶೃಂಗೇರಿ: ತಾಲೂಕಿನಲ್ಲಿ ಬುಧವಾರ ಸಂಭ್ರಮ ಸಡಗರದ ಮಹಾಶಿವರಾತ್ರಿ ಹಬ್ಬ ನಡೆಯಿತು. ಬೆಳಿಗ್ಗೆಯಿಂದಲೇ ಜನರು ದೇವಾಲಯಗಳಿಗೆ ತೆರಳಿ ಹಣ್ಣು ಕಾಯಿಗಳನ್ನು ಸಮರ್ಪಿಸಿದರು. ತಾಲೂಕಿನ ಎಲ್ಲಾ ದೇವಾಲಯಗಳಲ್ಲಿ ಮಹಾಶಿವರಾತ್ರಿಯ ವಿಶೇಷ ಪೂಜೆ ನೆರವೇರಿತು.

ಪಟ್ಟಣದ ಬೆಟ್ಟದ ಶ್ರೀ ಭವಾನಿ ಮಲಹಾನಿಕರೇಶ್ವರ ಸ್ವಾಮಿ ಸನ್ನಿದಿಯಲ್ಲಿ ಮಹಾಶಿವರಾತ್ರಿಯ ಅಂಗವಾಗಿ ವಿಶೇಷ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.ಬೆಳಿಗ್ಗೆ ಶ್ರೀ ಶಾರದಾಪೀಠದ ಜಗದ್ಗುರು ಭವಾನಿ ಮಲಹಾನಿಕರೇಶ್ವರ ಸ್ವಾಮಿ ಸನ್ನಿದಿಗೆ ಆಗಮಿಸಿ ಶ್ರೀ ಭವಾನಿ ಅಮ್ಮನವರಿಗೆ, ಶ್ರೀ ಮಲಹಾನಿಕರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆಯಿಂದಲೇ ಭಕ್ತರು ಬೆಟ್ಟಕ್ಕೆ ಸಾಲುಗಟ್ಟಿ ನಿಂತ ಸಾಗಿ ಸ್ವಾಮಿಗೆ ಹಣ್ಣು,ಕಾಯಿ,ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದರು. ಶೃಂಗೇರಿ ಪಟ್ಟಣದ ಭಾರತೀ ಬೀದಿಯಿಂದ ಬೆಟ್ಟದವರೆಗೂ ತಳಿರು ತೋರಣಗಳನ್ನು ಕಟ್ಟಿ ಸಿಂಗರಿಸಲಾಗಿತ್ತು. ದಾರಿಯನ್ನು ಶುಭ್ರಗೊಳಿಸಿ ರಂಗೋಲಿ ಚಿತ್ತಾರಗಳಿಂದ ಅಲಂಕರಿಸಲಾಗಿತ್ತು. ಶುಕ್ರವಾರ ಪಟ್ಟಣದ ರಥಬೀದಿಯಲ್ಲಿ ಶ್ರೀ ಭವಾನಿ ಮಲಹಾನಿಕರೇಶ್ವರ ಸ್ವಾಮಿ ಮಹಾರಥೋತ್ಸವ ನಡೆಯಲಿದೆ.