ಶಿವಕುಮಾರ ಶ್ರೀ, ಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೆ

| Published : Feb 15 2024, 01:16 AM IST

ಸಾರಾಂಶ

ಸ್ಫೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದ ಸಿದ್ದೇಶ್ವರ ಸ್ವಾಮೀಜಿ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ಸಿದ್ದಾಂತ ಶಿಖಾಮಣಿ ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು

ಕನ್ನಡಪ್ರಭ ವಾರ್ತೆ ಸರಗೂರು

ಶಿವಕುಮಾರ ಸ್ವಾಮೀಜಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು ಎಂದು ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಡಿ.ಜಿ. ಶಿವರಾಜು ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರಗೂರು ಘಟಕ ಹಾಗೂ ವೀರಶೈವ ಲಿಂಗಾಯಿತ ಸಮಾಜ ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶಿವರಾತ್ರೀಶ್ವರ ಶಿವಾನುಭವ ಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಫೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದ ಸಿದ್ದೇಶ್ವರ ಸ್ವಾಮೀಜಿ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ಸಿದ್ದಾಂತ ಶಿಖಾಮಣಿ ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಗುರು ಮುಖೇನ ಕಲಿತ ಜ್ಙಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದವರಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರಮುಖರು, ಇವರ ಪುಣ್ಯಸ್ಮರಣೆಯ ದಿನವಾದ ಇಂದು ದಾಸೋಹ ದಿನವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸ್ನೇಹಸ್ತ್ರೀ ಸಮಾಜದ ಅಧ್ಯಕ್ಷೆ ಸುಧಾ ಮುತ್ಯುಂಜಯಪ್ಪ ಮಾತನಾಡಿ, ಗ್ರಾಮೀಣ ಭಾಗದ ಬಡ ಮಕ್ಕಳ ಆಶಾಕಿರಣ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಕ್ಕಳಿಗೆ ಶಿಕ್ಷಣ ದಾಸೋಹ

ವಸತಿ ನೀಡಿ ಸರಳತೆಯ ಸಾರವನ್ನು ಹುಣಬಡಿಸಿದ ಪುಣ್ಯ ಪುರುಷರು, ಶ್ರೀಗಳು ಇಂತಹ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದೇ ನಮ್ಮೇಲ್ಲರ

ಸೌಭಾಗ್ಯ ಎಂದರು.

ಹಂಚೀಪುರ ಮಠದ ಚನ್ನಬಸವ ಸ್ವಾಮೀಜಿ, ದಡದಹಳ್ಳಿ ಷಡಕ್ಷರ ಸ್ವಾಮೀಜಿ, ಪಡವಲು ಶ್ರೀವಿರಕ್ತ ಮಠದ ಮಹದೇವ ಸ್ವಾಮೀಜಿ, ಹಂಚೀಪುರ ಮಠದ ಕಿರಿಯ

ಸ್ವಾಮೀಜಿ ತೋಂಟದಾರ್ಯ ಸ್ವಾಮೀಜಿ, ಬೀಚನಹಳ್ಳಿ ಪುರ ಮಠದ ನಾಗೇಂದ್ರ ಸ್ವಾಮೀಜಿ, ಜಕ್ಕಳ್ಳಿ ಮಠದ ಶಿವಕುಮಾರ ಸ್ವಾಮೀಜಿ, ಆರ್ಶಿವಚನ ನೀಡಿದರು,

ಇದಕ್ಕೂ ಮುನ್ನ ಬೆಳ್ಳಿರಥದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ವಿವಿಧ ಮಠಾದೀಶರು ಹಾಗೂ ಸಮಾಜದ ಬಂಧುಗಳು ಪುಷ್ಪನಮನ ಸಲ್ಲಿಸಿದರು. ನಂತರ ಪಟ್ಟಣ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾತಂಡ ಮಂಗಳ ವಾದ್ಯ ವೀರಗಾಸೆ, ಮೂಲಕ ಮೆರವಣಿಗೆ ನಡೆಯಿತು, ಪುಣ್ಯಸ್ಮರಣೆಯ ಅಂಗವಾಗಿ ಸಾವಿರಾರು

ಮಕ್ಕಳಿಗೆ ಭಕ್ತರಿಗೆ ದಾಸೋಹ ನಡೆಯಿತು.