ಸಾರಾಂಶ
ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಯತ್ನ ಪ್ರಕರಣ ಖಂಡಿಸಿ ಇಲ್ಲಿನ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊಳ್ಳೇಗಾಲ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಯತ್ನ ಪ್ರಕರಣ ಖಂಡಿಸಿ ಇಲ್ಲಿನ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಜಮಾವಣೆಗೊಂಡ ವಕೀಲರು ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಬಳಿಕ ಸುಪ್ರೀಂ ಕೋರ್ಟ್ ವಕೀಲ ರಾಕೇಶ್ ಕಿಶೋರ್ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟಿಸಿದರು. ವಕೀಲರ ಸಂಘದ ಅಧ್ಯಕ್ಷ ಎನ್.ಬಸವರಾಜು, ಕಾರ್ಯದರ್ಶಿ ಕೆಂಪಯ್ಯ, ವಕೀಲರಾದ ಮಹೇಶ್ ಕುಮಾರ್, ಹರ್ಷಿತ್, ಭೀಮಾರಾವ್, ಹಿರೊಯ ವಕೀಲರು ವೆಂಕಟಾಚಲ, ರವಿಕುಮಾರ್, ನಗರಸಭೆ ಅಧ್ಯಕ್ಷರು ರೇಖಾ, ಸ್ಥಾಯಿ ಸಮಿತಿ ಅಧ್ಯಕ್ಷರು ಸುರೇಶ್, ಮಾಜಿ ಅಧ್ಯಕ್ಷ ರಮೇಶ್ ಇದ್ದರು.