ಪ್ರಸಿದ್ಧ ಯಾತ್ರ ಸ್ಥಳವಾದ ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ ಉಂಟಾಗಿ 8 ಅಂಗಡಿಗಳು ಸುಟ್ಟು ಭಸ್ಮ ಆಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಬಿಳಿಗಿರಿರಂಗನ ಬೆಟ್ಟದಲ್ಲಿ ಬದುಕು ಕಳೆದುಕೊಂಡ ವ್ಯಾಪಾರಿಗಳ ಆಕ್ರಂದನ । ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೆ ಬೆಂಕಿ ವ್ಯಾಪಿಸಿ ಧಗಧಗಕನ್ನಡಪ್ರಭ ವಾರ್ತೆ ಯಳಂದೂರು

ಪ್ರಸಿದ್ಧ ಯಾತ್ರ ಸ್ಥಳವಾದ ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ ಉಂಟಾಗಿ 8 ಅಂಗಡಿಗಳು ಸುಟ್ಟು ಭಸ್ಮ ಆಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಬಿಳಿಗಿರಿರಂಗನಾಥ ಬೆಟ್ಟದ ಬಸ್ ನಿಲ್ದಾಣದ ಬಳಿಯಿದ್ದ ಹೋಟೇಲ್ ಹಾಗೂ ಅಂಗಡಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬುದು ಇನ್ನೂ ತಿಳಿದುಬಂದಿಲ್ಲ. ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೆ ಬೆಂಕಿ ವ್ಯಾಪಿಸಿ ಧಗಧಗಿಸಿದ್ದು ಅಗ್ನಿ ಅವಘಡದಲ್ಲಿ 3ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡು ಮತ್ತಷ್ಟು ಬೆಂಕಿ ತೀವ್ರತೆ ಹೆಚ್ಚಾಗಿ ಆತಂಕ ಸೃಷ್ಟಿಸಿತ್ತು.

ಸಂಜೆಯ ಬಳಿಕ ಚೆಕ್ ಪೋಸ್ಟ್ ಬಂದಾಗುವ ಹಿನ್ನೆಲೆ ಅಂಗಡಿ ಹೋಟೇಲ್ ನಲ್ಲಿ ಯಾರು ಇರಲಿಲ್ಲ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಲಕ್ಷಾಂತರ ರು.ಮೌಲ್ಯದ ವಸ್ತುಗಳು ಬೂದಿಯಾಗಿದೆ. ಸತತ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಯಳಂದೂರು ಪೊಲೀಸ್ ಠಾಣಾ ಸರ್ಕಲ್ ಇನ್ಸ್‌ಪೆಕ್ಟರ್ ಸುಬ್ರಮಣ್ಯ ಹಾಗೂ ಪಿಎಸ್ಐ ಆಕಾಶ್ ಸ್ಥಳ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಪರಿಹಾರ ಕೊಡಬೇಕು:

ಜಿಲ್ಲಾಡಳಿತ ಪರಿಶೀಲಿಸಿ ಅಗ್ನಿ ಅನಾಹುತದಿಂದ ಬದುಕು ಕಳೆದುಕೊಂಡಿರುವ ಬಡ ಕುಟುಂಬಗಳಿಗೆ ಪರಿಹಾರ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಆರ್ಥಿಕತೆಯನ್ನು ನೀಡುವ ಮೂಲಕ ಸಹಕಾರ ನೀಡಬೇಕೆಂದು ಮಾಜಿ ಶಾಸಕ ಎಸ್ ಬಾಲರಾಜ್ ಮನವಿ ಮಾಡಿದ್ದಾರೆ..

ಬಿಳಿಗಿರಿರಂಗನ ಬೆಟ್ಟದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು ಈಗಾಗಲೇ ವಿಚಾರ ಗಮನಕ್ಕೆ ಬಂದಿದೆ. ಅಧಿಕಾರಿಗಳಿಂದ ಮಾಹಿತಿ ತರಿಸಿ ಘಟನೆ ವಿವರ ತಿಳಿದು ಸರ್ಕಾರದಿಂದ ಬರುವ ಎಲ್ಲಾ ರೀತಿಯ ಸಹಕಾರ ಮತ್ತು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು.

ಎ .ಆರ್‌. ಕೃಷ್ಣಮೂರ್ತಿ, ಶಾಸಕ, ಕೊಳ್ಳೇಗಾಲ

ದಿನ ನಿತ್ಯದ ಜೀವನೋಪಾಯಕ್ಕೆ ಬದುಕು ಕಟ್ಟಿಕೊಂಡಿದ್ದ ವ್ಯಾಪಾರಿಗಳಿಗೆ ಆಕಸ್ಮಿಕ ವಿದ್ಯುತ್ ಅವಘಡದಿಂದ ಕಂಗಲಾಗಿದ್ದಾರೆ. ಇವರಿಗೆ ಸರ್ಕಾರ ಪರಿಹಾರ ನೀಡುವ ಮೂಲಕ ಇವರ ಬದುಕನ್ನು ಪುನಶ್ಚೇತನಗೊಳಿಸಬೇಕು. ವೆಂಕಟೇಶ್, ಸ್ಥಳೀಯ ನಿವಾಸಿ