ಸಾರಾಂಶ
ಬಸವನಬಾಗೇವಾಡಿ ಪಟ್ಟಣದ ತಾಲೂಕು ಪಂಚಾಯತಿಯಿಂದ ಹಿಡಿದು ಬಸ್ ನಿಲ್ದಾಣದವರೆಗೆ ಇರುವ ಅಂಗಡಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ವಶ ಪಡಿಸಿಕೊಂಡು ದಂಡ ವಿಧಿಸಿದರು.
ಬಸವನಬಾಗೇವಾಡಿ: ಪಟ್ಟಣದ ತಾಲೂಕು ಪಂಚಾಯತಿಯಿಂದ ಹಿಡಿದು ಬಸ್ ನಿಲ್ದಾಣದವರೆಗೆ ಇರುವ ಅಂಗಡಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ವಶ ಪಡಿಸಿಕೊಂಡು ದಂಡ ವಿಧಿಸಿದರು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚನೆ ನೀಡಲಾಯಿತು. ೯೦ ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ₹೧೦,೦೫೦ ದಂಡ ವಿಧಿಸಲಾಗಿದೆ ಎಂದು ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ ತಿಳಿಸಿದರು. ದಾಳಿ ಸಂದರ್ಭದಲ್ಲಿ ಪುರಸಭೆಯ ಸಿಬ್ಬಂದಿಯರಾದ ಐ.ಬಿ.ರಾಂಪೂರ, ಪರಮಾನಂದ ಕಂಟಿಗೊಂಡ ಇತರರು ಇದ್ದರು.