ಸಾರಾಂಶ
Short cercuit in Challakere: 3.50 damage
ಚಳ್ಳಕೆರೆ: ತಾಲೂಕಿನ ತಳಕು ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಗ್ರಾಮದ ತಿಪ್ಪಮ್ಮ ಎಂಬುವವರ ಮನೆ ಸಂಪೂರ್ಣ ಸುಟ್ಟು ಮೇಲ್ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ. ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಸುಮಾರು ೩.೫೦ ಲಕ್ಷ ನಷ್ಟ ಸಂಭವಿಸಿದೆ ಎಂದು ತಿಪ್ಪಮ್ಮ ತಿಳಿಸಿದ್ಧಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾರೆ. ನಷ್ಟದ ಅಂದಾಜನ್ನು ತಹಶೀಲ್ಧಾರ್‌ಗೆ ಮಾಹಿತಿ ನೀಡಿದ್ದು, ತಳಕು ಪೊಲೀಸರು ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
-----ಪೋಟೋ೯: ಸಿಎಲ್‌ಕೆ೫
ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ತಿಪ್ಪಮ್ಮ ಎಂಬುವವರ ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಸಂಪೂರ್ಣ ಸುಟ್ಟು ಮೇಲ್ಚಾವಣಿ ಕೆಳಗೆ ಕುಸಿದಿರುವುದು.-----