ಲೋಕಾಪುರ ಸಮೀಪದ ಜಂಜೂರಕೊಪ್ಪ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು 150ಕ್ಕೂ ಅಧಿಕ ಎಕರೆ ಕಬ್ಬು ಭಸ್ಮಗೊಂಡ ಘಟನೆ ಸೋಮವಾರ ಸಂಭವಿಸಿದೆ.
ಲೋಕಾಪುರ: ಸಮೀಪದ ಜಂಜೂರಕೊಪ್ಪ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು 150ಕ್ಕೂ ಅಧಿಕ ಎಕರೆ ಕಬ್ಬು ಭಸ್ಮಗೊಂಡ ಘಟನೆ ಸೋಮವಾರ ಸಂಭವಿಸಿದೆ. ಸಂಜೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ತೋಟಗಳಿಗೆ ವ್ಯಾಪಿಸಿದೆ. ರೈತರು ಬೆಂಕಿ ನಂದಿಸಲು 3 ಗಂಟೆ ಕಾಲ ಪ್ರಯತ್ನಿಸಿದರು. ಸುತ್ತಲಿನ ಸಕ್ಕರೆ ಕಾರ್ಖಾನೆಗಳ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೂ ಹೆಚ್ಚಿನ ಅನಾಹುತ ತಡೆಯಲು ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿ ಸಂಗಪ್ಪ, ಜಮಖಂಡಿ ಎಸಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ ಭೇಟಿ ನೀಡಿ ಪರಿಶೀಲಿಸಿದರು.
ಬೆಂಕಿ ದುರಂತದಲ್ಲಿ ನೂರಾರು ಎಕರೆ ಕಬ್ಬು ಬೆಳೆ ಹಾನಿಯ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರುಹಾನಿಯಾದ ಕಬ್ಬನ್ನು ಕೂಡಲೇ ಸಕ್ಕರೆ ಕಾರ್ಖಾನೆಗೆ ಸಾಗಿಸಲು ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಲೋಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.